ಗುವಾಹಟಿ: ಫೆಬ್ರವರಿಯಲ್ಲಿ ನಡೆಯಲಿರುವ ಮಣಿಪುರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಕ್ಷದಿಂದ ಟಿಕೆಟ್ ವಂಚಿತರಾದ ಜನಪ್ರತಿನಿಧಿಗಳ ಬೆಂಬಲಿಗರು ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಿಕೆಟ್ ವಂಚಿತರ ಬೆಂಬಲಿಗರು ಬಿಜೆಪಿ ವಿರುದ್ಧ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಹಾಗೂ ಸಿಎಂ ಬಿರೇನ್ ಸಿಂಗ್ ಅವರ ಪ್ರತಿಕೃತಿಗಳನ್ನು ಸುಟ್ಟುಹಾಕಿ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದ ಹಲವೆಡೆ ಪಕ್ಷದ ಕಚೇರಿಗಳನ್ನು ಧ್ವಂಸಗೊಳಿಸಲಾಗಿದೆ. ಇಂಫಾಲದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇದನ್ನೂ ಓದಿ: UP ಎಲೆಕ್ಷನ್: ಕಾಂಗ್ರೆಸ್ 4ನೇ ಪಟ್ಟಿ ಪ್ರಕಟ 24 ಮಹಿಳೆಯರಿಗೆ ಅವಕಾಶ
Advertisement
Advertisement
ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಪಕ್ಷದ ಕೆಲವರು ಕಾರ್ಯಕರ್ತರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಎಷ್ಟು ಮಂದಿ ರಾಜೀನಾಮೆ ನೀಡಲಿದ್ದಾರೆ ಎಂಬ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ.
Advertisement
ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 60 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಬಿಜೆಪಿ ಘೋಷಿಸಿದ್ದರಿಂದ ಬಿಜೆಪಿ ಸೇರಿದ್ದ 10 ಕಾಂಗ್ರೆಸ್‌ನ ಮಾಜಿ ನಾಯಕರಿಗೆ ಟಿಕೆಟ್ ನೀಡಲಾಗಿದೆ. ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: 23 ಕಿಮೀ ಅನ್ನು ಕೇವಲ 15 ನಿಮಿಷಗಳಲ್ಲಿ ಕ್ರಮಿಸಿ ಜೀವ ಉಳಿಸಿದ ಆಂಬುಲೆನ್ಸ್
Advertisement
2017ರ ಚುನಾವಣೆಯಲ್ಲಿ ಬಿಜೆಪಿ 21 ಸ್ಥಾನಗಳನ್ನು ಗೆದ್ದು ಇತರೆ ಸ್ಥಳೀಯ ಪಕ್ಷಗಳು ಹಾಗೂ ಸ್ವತಂತ್ರ ಅಭ್ಯರ್ಥಿಗಳ ಸಹಕಾರದೊಂದಿಗೆ ಸರ್ಕಾರ ರಚಿಸಿತ್ತು. ಇವರ ಪೈಕಿ 19 ಶಾಸಕರಿಗೆ ಟಿಕೆಟ್ ನೀಡಲಾಗಿದ್ದು, ಮೂವರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮಣಿಪುರದಲ್ಲಿ ಬಿಜೆಪಿ ಮೂವರು ಮಹಿಳೆಯರು ಮತ್ತು ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.