ಇಂಫಾಲ್: ಮಣಿಪುರದಲ್ಲಿ ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ (Manipur Women Parade) ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನ ಮರಣದಂಡನೆ ಶಿಕ್ಷೆಗೂ ಸರ್ಕಾರ ಪರಿಗಣಿಸಲಿದೆ ಎಂದು ಮುಖ್ಯಮಂತ್ರಿ ಬಿರೇನ್ ಸಿಂಗ್ (Biren Singh) ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಗೌರವ ಮತ್ತು ಅಮಾನವೀಯ ಕೃತ್ಯಕ್ಕೆ ಒಳಗಾದ ಮಹಿಳೆಯರ ವೀಡಿಯೋ ನೋಡಿ ತೀವ್ರ ಬೇಸರವಾಗಿದೆ. ಸ್ವಯಂ ದೂರು ದಾಖಲಿಸಿಕೊಂಡಿರುವ ಪೊಲೀಸರು ಈಗಾಗಲೇ ಆರೋಪಿಯನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ – ಸುಪ್ರೀಂಕೋರ್ಟ್ ಅಸಮಾಧಾನ, ಸ್ವಯಂ ದೂರು ದಾಖಲು
Advertisement
My hearts go out to the two women who were subjected to a deeply disrespectful and inhumane act, as shown in the distressing video that surfaced yesterday. After taking a Suo-moto cognisance of the incident immediately after the video surfaced, the Manipur Police swung to action…
— N.Biren Singh (@NBirenSingh) July 20, 2023
Advertisement
ಪ್ರಸ್ತುತ ಸಂಪೂರ್ಣ ತನಿಖೆ ನಡೆಯುತ್ತಿದೆ, ಮುಖ್ಯ ಆರೋಪಿಗೆ ಮರಣದಂಡನೆಯ ಸಾಧ್ಯತೆಯನ್ನು ಸೇರಿದಂತೆ ಎಲ್ಲಾ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದನ್ನ ನಾವು ಖಚಿತಪಡಿಸುತ್ತೇವೆ. ನಮ್ಮ ಸಮಾಜದಲ್ಲಿ ಇಂತಹ ಹೇಯ ಕೃತ್ಯಗಳಿಗೆ ಯಾವುದೇ ಸ್ಥಾನವಿಲ್ಲ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಸಭ್ಯ ಸಮಾಜಕ್ಕೆ ನಾಚಿಕೆಗೇಡಿನ ಸಂಗತಿ – ತಪ್ಪಿಸ್ಥರನ್ನ ಬಿಡೋದಿಲ್ಲ ; ಮಣಿಪುರ ಘಟನೆ ಸಂಬಂಧ ಮೋದಿ ಫಸ್ಟ್ ರಿಯಾಕ್ಷನ್
Advertisement
Advertisement
ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿಕೆ, ಸುಪ್ರೀಂ ಕೋರ್ಟ್ ಸ್ವಯಂದೂರಿನ ಬಳಿಕ ಘಟನೆಗೆ ಸಂಬಂಧಿಸುದಂತೆ ಸ್ವಯಂ ದೂರು ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಹಿಳಾ ಆಯೋಗ, ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿ ಡಿಜಿಪಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪತ್ರ ಬರೆದಿದೆ. ಇದನ್ನೂ ಓದಿ: ಮಣಿಪುರ ಮಹಿಳೆಯ ಬೆತ್ತಲೆ ಮೆರವಣಿಗೆ ಪ್ರಕರಣ – ಓರ್ವ ಆರೋಪಿ ಅರೆಸ್ಟ್
ಈ ಬಗ್ಗೆ ಮಾತನಾಡಿರುವ ಅಧ್ಯಕ್ಷೆ ರೇಖಾ ಶರ್ಮಾ, ಘಟನೆಗೆ ಸಂಬಂಧಿಸಿದಂತೆ ಓರ್ವ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದ್ದು, ಸಂಜೆ ವೇಳೆಗೆ ಇನ್ನಷ್ಟು ಆರೋಪಿಗಳನ್ನ ಬಂಧಿಸುವ ಸಾಧ್ಯತೆ ಇದೆ. ಟ್ವಿಟರ್‌ನಲ್ಲಿ ವೀಡಿಯೊಗಳ ಪ್ರಸಾರ ಅನುಮತಿಸುವುದರ ವಿರುದ್ಧ ನಾವು ನೋಟಿಸ್ ನೀಡಿದ್ದೇವೆ. ಇದು ನಿಜಕ್ಕೂ ಆಘಾತಕಾರಿ ಬೆಳವಣಿಗೆ. ಇಂತಹ ಹಲವು ಘಟನೆಗಳು ರಾಜಸ್ಥಾನ ಮತ್ತು ಮಣಿಪುರದಿಂದ ವರದಿಯಾಗುತ್ತಿವೆ. ನಾನು ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಆರೋಪಿಗಳಿಗೆ ಶಿಕ್ಷೆಯಾಗಲಿದೆ ಎಂದು ಅವರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
Web Stories