ಲಕ್ನೋ: ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲಿರುವ ನಿರ್ಗಮಿತ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಹಾಗೂ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Singh), ಮಣಿಪುರದಲ್ಲಿ ಇತ್ತೀಚೆಗೆ ನಡೆದ ಘಟನೆ ಖಂಡನೀಯ ಮತ್ತು ಸ್ವತಂತ್ರ ಭಾರತದಲ್ಲಿ ಇದು ದುಃಖಕರ ಘಟನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮಣಿಪುರದಲ್ಲಿ (Manipur Violence) ಎರಡು ಬುಡಕಟ್ಟು ಸಮುದಾಯಗಳ ನಡುವೆ ಸಂಘರ್ಷ ಏರ್ಪಟ್ಟಿದೆ. ಮೇ 4 ರಂದು ನಡೆದಿದೆ ಎನ್ನಲಾದ ಘಟನೆಯೊಂದರ ವೀಡಿಯೋ ದೇಶಾದ್ಯಂತ ಭಾರೀ ಸದ್ದು ಮಾಡಿತ್ತು. ಬುಡಕಟ್ಟು ಸಮುದಾಯದ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ ಕೆಲ ಪುರುಷರು ದೌರ್ಜನ್ಯ ಎಸಗಿದ್ದರು. ಈ ದೃಶ್ಯದ ವೀಡಿಯೋ ವೈರಲ್ ಆಗಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಇದನ್ನೂ ಓದಿ: ಬೆತ್ತಲೆ ಮೆರವಣಿಗೆ ದಿನವೇ ಮತ್ತಿಬ್ಬರು ಯುವತಿಯರ ಮೇಲೆ ರೇಪ್, ಮರ್ಡರ್ ಆರೋಪ – ಮಣಿಪುರ ಧಗ ಧಗ
Advertisement
Advertisement
ಈ ಕುರಿತು ಮಾತನಾಡಿರುವ ಬ್ರಿಜ್ ಭೂಷಣ್, ಮಣಿಪುರದ ಪರಿಸ್ಥಿತಿ ಕಷ್ಟಕರವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಅಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಮಣಿಪುರ ಘಟನೆ ಅತ್ಯಂತ ದುಃಖಕರವಾಗಿದೆ. ಇದು ಸ್ವತಂತ್ರ ಭಾರತದಲ್ಲಿ ನಡೆದಿರುವ ಅತ್ಯಂತ ದುಃಖಕರ ಘಟನೆ. ಪ್ರಧಾನಿಗಳು ಈ ವಿಷಯದ ಬಗ್ಗೆ ಗಮನ ಹರಿಸಿದ್ದಾರೆ. ಅಲ್ಲದೇ ಘಟನೆ ವಿರುದ್ಧ ಟೀಕೆಗಳನ್ನು ಮಾಡಿದ್ದಾರೆ. ಈ ಘಟನೆಯನ್ನು ನಾನು ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ.
Advertisement
ಕುಸ್ತಿಪಟುಗಳು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನಿರ್ಗಮಿತ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಫೆಡರೇಶನ್‌ನ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಸಿಂಗ್ ಅವರಿಗೆ ದೆಹಲಿ ನ್ಯಾಯಾಲಯವು ಗುರುವಾರ ಜಾಮೀನು ನೀಡಿದೆ. ಇದನ್ನೂ ಓದಿ: ಪ.ಬಂಗಾಳದಲ್ಲಿಯೂ ನಡೆದಿತ್ತು ಮಹಿಳೆಯರಿಬ್ಬರ ಅರೆಬೆತ್ತಲೆ ಮೆರವಣಿಗೆ- ವೀಡಿಯೋ ವೈರಲ್
Advertisement
ಸುಮಾರು ಎರಡೂವರೆ ತಿಂಗಳಿನಿಂದ ಎರಡು ಪ್ರಮುಖ ಸಮುದಾಯಗಳ ನಡುವೆ ನಡೆಯುತ್ತಿರೋ ಸಂಘರ್ಷದ ಕಾರಣದಿಂದ ಮಣಿಪುರ ಎಂಬ ಪುಟ್ಟ ರಾಜ್ಯ ಹೊತ್ತಿ ಉರಿಯುತ್ತಿದೆ. ಈವರೆಗೂ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಖುದ್ದು ಸೇನೆ ಫೀಲ್ಡ್‌ಗೆ ಇಳಿದರೂ ಸಂಘರ್ಷ ಶಮನವಾಗಿಲ್ಲ.
Web Stories