ಇಂಫಾಲ್: ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹೊಂದಿದ್ದ ಓರ್ವ ಉಗ್ರನನ್ನು ಮಣಿಪುರದ (Manipur) ಪೊಲೀಸರು (Police) ಬಂಧಿಸಿದ್ದಾರೆ. ಆತನ ಬಳಿಯಿದ್ದ 1,200ಕ್ಕೂ ಹೆಚ್ಚು ಕಾರ್ಟ್ರಿಡ್ಜ್‌ಗಳು ಮತ್ತು 68 ಲ್ಯಾಥೋಡ್ ಬಾಂಬ್‍ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂಫಾಲ್‍ನ ಬಳಿ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ, ಒಂದು ಕಾರನ್ನು ತಡೆದಿದ್ದಾರೆ. ಈ ವೇಳೆ ಆತ ಕಾರು ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ್ದಾನೆ. ಬಳಿಕ ಪೊಲೀಸರು ಆತನ ಕಾರನ್ನು ಹಿಂಬಾಲಿಸಿ ತಡೆದು ಪರಿಶೀಲನೆ ನಡೆಸಿದಾಗ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಪತ್ತೆಯಾಗಿದೆ. ಇದನ್ನೂ ಓದಿ: ರೇವಣ್ಣ ಆಪ್ತನ ಕಿಡ್ನ್ಯಾಪ್ ಯತ್ನ ಕೇಸ್ – ಇನ್ಸ್‌ಪೆಕ್ಟರ್‌ಗೆ ಭೂಗತ ಪಾತಕಿ ಲಿಂಕ್
7.62 ಎಂಎಂ ಕಾರ್ಟ್ರಿಡ್ಜ್‌ನ 573 ಸುತ್ತುಗಳು ಮತ್ತು 5.56 ಎಂಎಂ 294 ಸುತ್ತುಗಳು, ಜೊತೆಗೆ 40 ಎಂಎಂ ಲ್ಯಾಥೋಡ್ ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ವ್ಯಕ್ತಿಯನ್ನು ಉಗ್ರಗಾಮಿ ಎಂದು ಗುರುತಿಸಲಾಗಿದೆ. ಆತನ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ.
ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದೆ. ಅಲ್ಲದೇ ಪತ್ತೆಯಾದ ವಸ್ತುಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಒಂದೂವರೆ ಸಾವಿರ ರೂ.ಗಾಗಿ ಮಗನಿಂದ ತಂದೆಯ ಬರ್ಬರ ಹತ್ಯೆ
Web Stories