ಇಂಫಾಲ: ಪೊಲೀಸ್ (Police) ಪೇದೆಯೊಬ್ಬ ಸಬ್ ಇನ್ಸ್‌ಪೆಕ್ಟರ್ ಶ್ರೇಣಿಯ ಪೊಲೀಸ್ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆಗೈದ ಘಟನೆ ಮಣಿಪುರದ (Manipur) ಮೊಂಗ್‌ಬಂಗ್ ಗ್ರಾಮದಲ್ಲಿ ನಡೆದಿದೆ.
ಶನಿವಾರ ಮೊಂಗ್‌ಬಂಗ್ ಪೊಲೀಸ್ ಪೋಸ್ಟ್‌ನಲ್ಲಿ ಕಾನ್‌ಸ್ಟೆಬಲ್ ಬಿಕ್ರಮ್‌ಜಿತ್ ಸಿಂಗ್ ಹಾಗೂ ಸಬ್ ಇನ್‌ಸ್ಪೆಕ್ಟರ್ ಷಹಜಹಾನ್ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಕಾನ್ಸ್‌ಟೇಬಲ್ ಸಬ್ ಇನ್‌ಸ್ಪೆಕ್ಟರ್ ಮೇಲೆ ಏಕಾಏಕಿ ಗುಂಡು ಹಾರಿಸಿದ್ದಾನೆ. ಇದರಿಂದ ಸಬ್ ಇನ್‌ಸ್ಪೆಕ್ಟರ್ ಷಹಜಹಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಕ್ಷಣ ಆರೋಪಿ ಕಾನ್‌ಸ್ಟೆಬಲ್‌ನನ್ನು ಇತರ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ವರ್ಷದಲ್ಲಿ ಮೂರು ಮನೆಯನ್ನು ಬದಲಿಸಿದ್ದ ಗುರುಪ್ರಸಾದ್
ಜನಾಂಗೀಯ ಹಿಂಸಾಚಾರದಿಂದ ನಲಗುತ್ತಿರುವ ಮಣಿಪುರದ ಭಾಗದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಈ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದಾರೆ.
ಜಿರಿಬಾಮ್‌ನಲ್ಲಿ ಈ ವರ್ಷ ಜೂನ್‌ನಲ್ಲಿ ಒಂದು ಸಮುದಾಯಕ್ಕೆ ಸೇರಿದ 59 ವರ್ಷದ ವ್ಯಕ್ತಿಯನ್ನು ಮತ್ತೊಂದು ಸಮುದಾಯದವರು ಹತ್ಯೆಗೈದಿದ್ದರು. ನಂತರ ಈ ಭಾಗದಲ್ಲಿ ಹಿಂಸಾಚಾರ ಸ್ಫೋಟಗೊಂಡಿತ್ತು. ಬಳಿಕ ಎರಡೂ ಕಡೆಯವರಿಂದ ಘರ್ಷಣೆ ನಡೆದಿತ್ತು. ಇದಾದ ನಂತರ ಸಾವಿರಾರು ಜನರನ್ನು ಪುನರ್ವಸತಿ ಶಿಬಿರಗಳಿಗೆ ಸ್ಥಳಾಂತರಿಸಲಾಗಿತ್ತು.
ಕಳೆದ ವರ್ಷ ಮೇ ತಿಂಗಳಿನಿಂದ ಇಂಫಾಲ ಕಣಿವೆಯಲ್ಲಿ ಮೇಟಿ ಮತ್ತು ಕುಕಿ ಗುಂಪುಗಳ ನಡುವೆ ಜನಾಂಗೀಯ ಹಿಂಸಾಚಾರದ ನಡೆದಿತ್ತು. ಈ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಇದನ್ನೂ ಓದಿ: ಗುರುಪ್ರಸಾದ್ ಕೊನೆಯ ಚಾಟ್ ಏನಾಗಿತ್ತು?: ಸಂಬಂಧಿ ರವಿ ದೀಕ್ಷಿತ್ ಹೇಳೋದೇನು?