ಇಂಫಾಲ: ಮಣಿಪುರದ (Manipur) ಉಖ್ರುಲ್ ಜಿಲ್ಲೆಯಲ್ಲಿ ಇಂದು (ಶುಕ್ರವಾರ) ಮುಂಜಾನೆ ನಡೆದ ಹಿಂಸಾಚಾರದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಶಸ್ತ್ರಸಜ್ಜಿತ ದುಷ್ಕರ್ಮಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಈ ಘಟನೆ ನಡೆದಿದೆ.
ಮಣಿಪುರದ ಉಖ್ರುಲ್ ಜಿಲ್ಲೆಯ ಥೋವೈ ಕುಕಿ ಗ್ರಾಮದಲ್ಲಿ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಮೂವರು ಗ್ರಾಮಸ್ಥರ ಸಾವಿಗೆ ಕಾರಣವಾಯಿತು. ಮೃತರನ್ನು ಜಮ್‌ಖೋಗಿನ್ ಹಾಕಿಪ್ (26), ತಂಗ್‌ಖೋಕೈ ಹಾಕಿಪ್ (35) ಮತ್ತು ಹೊಲೆನ್ಸನ್ ಬೈಟ್ (24) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: Himachal Pradesh Rain: ರಣಭೀಕರ ಮಳೆಗೆ 74 ಮಂದಿ ಸಾವು – 10 ಸಾವಿರ ಕೋಟಿ ನಷ್ಟ!
ಇದು ಹಿಂಸಾಚಾರ-ಪೀಡಿತ ಮಣಿಪುರದ ಇತ್ತೀಚಿನ ಘಟನೆಯಾಗಿದೆ. ಮಣಿಪುರದಲ್ಲಿ ಮೇ 3 ರಿಂದ ಜನಾಂಗೀಯ ಘರ್ಷಣೆಗಳು ನಡೆಯುತ್ತಲೇ ಇವೆ. ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಮೈಥೇಯ್ ಸಮುದಾಯದ ಬೇಡಿಕೆ ವಿರುದ್ಧ ಕುಕಿ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಇದು ಎರಡು ಸಮುದಾಯಗಳ ನಡುವಿನ ಹಿಂಸಾಚಾರಕ್ಕೆ ಕಾರಣವಾಗಿದೆ.
ಹಿಂಸಾಚಾರ ಭುಗಿಲೆದ್ದ ನಂತರ ಇಲ್ಲಿಯವರೆಗೆ 120 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 3,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹಿಂಸಾಚಾರ ನಿಯಂತ್ರಿಸಲು ಮತ್ತು ರಾಜ್ಯವನ್ನು ಸಹಜ ಸ್ಥಿತಿಗೆ ತರಲು ಮಣಿಪುರ ಪೊಲೀಸರಲ್ಲದೆ ಸುಮಾರು 40,000 ಕೇಂದ್ರ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ. ಇದನ್ನೂ ಓದಿ: ಸಮುದ್ರದ ಮಧ್ಯದಲ್ಲಿ ಚೀನಾ ಪ್ರಜೆ ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್ – ಧನ್ಯವಾದ ತಿಳಿಸಿದ ಚೀನಾ
Web Stories