ಇಂಫಾಲ್: ರಾಜ್ಯದಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ನಾಗರಿಕರ ವಿರುದ್ಧ ಶಸ್ತ್ರಾಸ್ತ್ರ ಬಳಸಿ ದಾಳಿ ನಡೆಸಿದ್ದ ಕನಿಷ್ಠ 40 ಮಂದಿ ದಂಗೆಕೋರರು (Insurgents) ಹತರಾಗಿದ್ದಾರೆ. ಇನ್ನೂ ಕೆಲವು ಕಿಡಿಗೇಡಿಗಳನ್ನ ಬಂಧಿಸಲಾಗಿದೆ ಎಂದು ಸಿಎಂ ಎ. ಬಿರೇನ್ ಸಿಂಗ್ (N Biren Singh) ಭಾನುವಾರ ತಿಳಿಸಿದ್ದಾರೆ.
ಮಣಿಪುರದಲ್ಲಿ ಸದ್ಯ ಇನ್ನೂ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿರುವುದರಿಂದ ಮೇ 31ರ ವರೆಗೂ ರಾಜ್ಯಾದ್ಯಂತ ಇಂಟರ್ನೆಟ್ ಸೇವೆ (Internet Service) ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: Manipur Violence: ಧಗ ಧಗನೆ ಹೊತ್ತಿ ಉರಿಯುತ್ತಿದ್ದ ಮಣಿಪುರ ಸಹಜ ಸ್ಥಿತಿಗೆ – ಮೂರೇ ದಿನದಲ್ಲಿ 54 ಮಂದಿ ಸಾವು
Advertisement
Advertisement
ಇದೇ ತಿಂಗಳ ಮೇ 3ರಂದು ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ನಡೆಸುತ್ತಿದ್ದ ಪ್ರತಿಭಟನೆ ವೇಳೆ ವ್ಯಾಪಕ ಹಿಂಸಾಚಾರ ಭುಗಿಲೆದ್ದಿತ್ತು. ಎಸ್ಟಿ ಸ್ಥಾನಮಾನ ನೀಡಬೇಕೆಂಬ ಮೀಟೈ ಸಮುದಾಯದ ಬೇಡಿಕೆಯನ್ನ ವಿರೋಧಿಸಲಾಗಿತ್ತು. ಆ ನಂತರ ಹಿಂಸಾಚಾರ ಭುಗಿಲೆದ್ದಿತ್ತು.
Advertisement
Advertisement
ಭಾನುವಾರ (ಮೇ 28) ಹಿಂಸಾಚಾರ ಪೀಡಿತ ಸ್ಥಳಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿ ನೀಡಿ ಪರಿಶೀಲಿಸಿದರು. ಇದಕ್ಕೆ ಮೂರು ದಿನ ಮುಂಚಿತವಾಗಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಸಹ ಮಣಿಪುರ ರಾಜಧಾನಿಗೆ ಭೇಟಿ ನೀಡಿದ್ದರು. ಘರ್ಷಣೆ ನಡೆದು ಒಂದು ತಿಂಗಳಾದರೂ ಮಣಿಪುರದಲ್ಲಿ ಇನ್ನೂ ಅಶಾಂತಿ ವಾತಾವರಣ ಮುಂದುವರಿದಿದೆ. ಇದನ್ನೂ ಓದಿ: ಕುಸ್ತಿಪಟುಗಳ ಮೇಲೆ ದೌರ್ಜನ್ಯ – ದೆಹಲಿ ಪೊಲೀಸರ ನಡೆಗೆ ವ್ಯಾಪಕ ಖಂಡನೆ
ಮಣಿಪುರದಲ್ಲಿ ಹಿಂಸಾರ ನಡೆದಿದ್ದೇಕೆ?
ಮೀಟೈ ಸಮುದಾಯ ಎಸ್ಟಿ ಸ್ಥಾನಮಾನದ ಬೇಡಿಕೆಯ ಕುರಿತು 4 ವಾರಗಳಲ್ಲಿ ಕೇಂದ್ರಕ್ಕೆ ಶಿಫಾರಸನ್ನು ಕಳುಹಿಸುವಂತೆ ಮಣಿಪುರ ಹೈಕೋರ್ಟ್ ಕಳೆದ ತಿಂಗಳು ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ನಂತರ ನಾಗಾಗಳು ಮತ್ತು ಕುಕಿಗಳು ಸೇರಿದಂತೆ ಬುಡಕಟ್ಟು ಜನಾಂಗದವರು ಮೆರವಣಿಗೆಯನ್ನು ಆಯೋಜಿಸಿದ್ದರು. ಆಲ್ ಟ್ರೈಬಲ್ ಸ್ಟೂಡೆಂಟ್ ಯೂನಿಯನ್ ಮಣಿಪುರ ಚುರಾಚಂದ್‌ಪುರ ಜಿಲ್ಲೆಯ ಟೋರ್ಬಂಗ್ ಪ್ರದೇಶದಲ್ಲಿ ಬುಡಕಟ್ಟು ಐಕ್ಯತಾ ಮೆರವಣಿಗೆಗೆ ಕರೆ ನೀಡಿತ್ತು. ಈ ರ‍್ಯಾಲಿಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ಆದರೆ ಈ ಸಂದರ್ಭದಲ್ಲಿ ಆದಿವಾಸಿಗಳು ಮತ್ತು ಬುಡಕಟ್ಟು ಜನಾಂಗದವರ ನಡುವೆ ಹಿಂಸಾಚಾರ ನಡೆದಿತ್ತು.
ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸಲು ರಾಜ್ಯದ ಇತರ ಭಾಗಗಳಿಂದಲೂ ಹೆಚ್ಚುವರಿ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದವು. ಪರಿಸ್ಥಿತಿ ಕೈಮೀರಿದ್ದರಿಂದಾಗಿ ಕಂಡಲ್ಲಿ ಗುಂಡು ಹಾರಿಸಲು ಸರ್ಕಾರ ಆದೇಶ ಹೊರಡಿಸಿತ್ತು. ಈ ಬೆನ್ನಲ್ಲೇ ಸೇನಾಪಡೆಗಳು ಹಾಗೂ ಕೇಂದ್ರೀಯ ಭದ್ರತಾಪಡೆಗಳ ಕ್ಷಿಪ್ರ ಕಾರ್ಯಾಚರಣೆಯಿಂದ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತ್ತು. ಆದ್ರೆ ಮತ್ತೆ ಅಶಾಂತಿ ವಾತಾವರಣ ಮುಂದುವರಿದ್ದು, ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಿರುವುದನ್ನ ಮುಂದುವರಿಸಲಾಗಿದೆ.