ನವದೆಹಲಿ: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ (New Excise Policy) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮತ್ತು ಕೇಂದ್ರೀಯ ತನಿಖಾ ದಳ (CBI) ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು (Bail) ನೀಡುವಂತೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ (Manish Sisodia) ದೆಹಲಿ ಹೈಕೋರ್ಟ್‌ಗೆ (Delhi Highcourt) ಅರ್ಜಿ ಸಲ್ಲಿಸಿದ್ದಾರೆ.
ಪಿಎಂಎಲ್‌ಎ ವಿಶೇಷ ನ್ಯಾಯಾಲಯ ರೋಸ್ ಅವೆನ್ಯೂ ಕೋರ್ಟ್ ಎರಡನೇ ಸಾಮಾನ್ಯ ಜಾಮೀನು ಅರ್ಜಿ ವಜಾ ಮಾಡಿದ ಹಿನ್ನೆಲೆ ಮೇಲ್ಮನವಿ ಸಲ್ಲಿಸಿರುವ ಅವರು ವಿಧಾನಸಭೆ ಸದಸ್ಯನಾಗಿದ್ದು, ಲೋಕಸಭಾ ಚುನಾವಣೆ ಹಿನ್ನೆಲೆ ತುರ್ತು ವಿಚಾರಣೆ ನಡೆಸುವಂತೆ ಇಂದು ಮನವಿ ಮಾಡಿದರು. ಆದರೆ ತುರ್ತು ವಿಚಾರಣೆಗೆ ನಿರಾಕರಿಸಿದ ಹೈಕೋರ್ಟ್ ಶುಕ್ರವಾರ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ – ಡಿವೈಎಸ್‍ಪಿ ವಿರುದ್ಧದ ಘೋಷಿತ ಆರೋಪಿ ಆದೇಶ ಕೈಬಿಟ್ಟ ಹೈಕೋರ್ಟ್
Advertisement
Advertisement
ರೋಸ್ ಅವೆನ್ಯೂ ಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ್ದ ಸಿಬಿಐ ಪ್ರಾಸಿಕ್ಯೂಟರ್ ಪಂಕಜ್ ಗುಪ್ತಾ, ಜಾಮೀನು ಅರ್ಜಿಯನ್ನು ವಿರೋಧಿಸಿದರು. ಸಿಸೋಡಿಯಾ ಅವರು ರಾಜಕೀಯ ಪ್ರಭಾವ ಹೊಂದಿರುವ ಪ್ರಬಲ ವ್ಯಕ್ತಿ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಿಸೋಡಿಯಾ ಇತರೇ ಆರೋಪಿಗಳ ಸಮಾನತೆಗೆ ಅರ್ಹರಲ್ಲ ಎಂದು ವಾದಿಸಿದರು. ಸಿಸೋಡಿಯಾ ಅವರು ಸಾಕ್ಷ್ಯ ನಾಶ ಮತ್ತು ಅಧಿಕಾರದ ದುರುಪಯೋಗ ಮಾಡಿಕೊಳ್ಳಬಹುದು. ಇದು ತನಿಖೆಗೆ ಅಡ್ಡಿಯಾಗಬಹುದು ಎಂದು ಗುಪ್ತಾ ಹೇಳಿದರು. ಇದನ್ನೂ ಓದಿ: ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮೊಯ್ಲಿ
Advertisement
ಇ.ಡಿ ಪರ ವಾದಿಸಿದ್ದ ಜೋಹೆಬ್ ಹೊಸೈನ್, ತನಿಖೆಯಲ್ಲಿ ಯಾವುದೇ ವಿಳಂಬವಾಗಿಲ್ಲ. ತನಿಖೆ ವಿಳಂಬ ಆರೋಪವನ್ನು ಒಪ್ಪಲು ಸಾಧ್ಯವಿಲ್ಲ. ಪ್ರಕರಣದ ಸಾಕ್ಷ್ಯಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಹಲವು ಆರೋಪಿಗಳನ್ನು ಬಂಧಿಸಲಾಗುತ್ತಿದೆ. ಈ ಹಂತದಲ್ಲಿ ಸಿಸೋಡಿಯಾ ಅವರಿಗೆ ಜಾಮೀನು ನೀಡುವುದು ಸೂಕ್ತವಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ತನಿಖಾ ಸಂಸ್ಥೆಗಳ ವಾದ ಪುರಸ್ಕರಿಸಿದ ಕೋರ್ಟ್, ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಎರಡನೇ ಸಾಮಾನ್ಯ ಅರ್ಜಿಯನ್ನು ವಜಾ ಮಾಡಿತ್ತು. ಇದನ್ನೂ ಓದಿ: ಕಾಂಗ್ರೆಸ್ ಇಲ್ಲಿ ಸಾಯ್ತಿದ್ರೆ ಪಾಕ್ ಅಲ್ಲಿ ಅಳುತ್ತಿದೆ: ಮೋದಿ
Advertisement
ಕಳೆದ ವರ್ಷ ಫೆಬ್ರವರಿ 26 ಮತ್ತು ಮಾರ್ಚ್ 9 ರಂದು ಮನೀಷ್ ಸಿಸೋಡಿಯಾ ಅವರನ್ನು ಕ್ರಮವಾಗಿ ಸಿಬಿಐ ಮತ್ತು ಇಡಿ ಮೊದಲ ಬಾರಿಗೆ ಬಂಧಿಸಿತ್ತು. ಸಿಬಿಐ ದಾಖಲಿಸಿದ ಎಫ್‌ಐಆರ್‌ನಲ್ಲಿ, ಸಿಸೋಡಿಯಾ ಮತ್ತು ಇತರರು 2021-22ರ ಅಬಕಾರಿ ನೀತಿಗೆ ಸಂಬಂಧಿಸಿದಂತೆ ‘ಶಿಫಾರಸು’ ಮತ್ತು ‘ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ’ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಒಂದು ಸುಳ್ಳನ್ನು ಸಾವಿರ ಬಾರಿ ಪುನರಾವರ್ತಿಸಿದರೂ ಅದು ಸತ್ಯವಾಗುವುದಿಲ್ಲ: ಖರ್ಗೆ