ನವದೆಹಲಿ: ನನ್ನನ್ನು ಬಂಧಿಸುವಂತೆ ಒತ್ತಡ ಹಾಕಿದ್ದಕ್ಕೆ ಸಿಬಿಐ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಸ್ಫೋಟಕ ಹೇಳಿಕೆಯನ್ನು ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನೀಡಿದ್ದಾರೆ. ಆದರೆ ಈ ಹೇಳಿಕೆಯನ್ನು ಕೇಂದ್ರೀಯ ತನಿಖಾ ದಳ(ಸಿಬಿಐ) ತಳ್ಳಿಹಾಕಿದೆ.
ಸಿಬಿಐನ ಭ್ರಷ್ಟಾಚಾರ ನಿಗ್ರಹ ದಳದ ಉಪ ಕಾನೂನು ಸಲಹೆಗಾರರಾಗಿದ್ದ ಸಿಬಿಐ ಅಧಿಕಾರಿ ಜಿತೇಂದ್ರ ಕುಮಾರ್ ಅವರಿಗೆ ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ, ಬಂಧಿಸುವಂತೆ ಒತ್ತಡ ಹೇರಲಾಗಿತ್ತು. ಈ ಹಿನ್ನೆಲೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸೋಮವಾರ ಸಿಸೋಡಿಯಾ ಹೇಳಿದ್ದಾರೆ.
Advertisement
Advertisement
ಸಿಸೋಡಿಯಾ ಅವರ ಹೇಳಿಕೆಯನ್ನು ತಳ್ಳಿಹಾಕಿರುವ ಸಿಬಿಐ, ದೆಹಲಿ ಉಪ ಮುಖ್ಯಮಂತ್ರಿಯವರ ಹೇಳಿಕೆಯು ತಪ್ಪುದಾರಿಗೆಳೆಯುವಂತೆ ಮಾಡುತ್ತಿದೆ. ಈ ಹೇಳಿಕೆ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ನಡೆಯುತ್ತಿರುವ ತನಿಖೆಯ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನವಾಗಿದೆ ಎಂದು ಹೇಳಿದೆ. ಇದನ್ನೂ ಓದಿ: ಭಾರತದ ರಿಷಿಗೆ ಸೋಲು – ಬ್ರಿಟನ್ ಪ್ರಧಾನಿ ಗದ್ದುಗೆ ಏರಿದ ಲಿಜ್ ಟ್ರಸ್
Advertisement
ಸಿಸೋಡಿಯಾ ಅವರ ಹೇಳಿಕೆಯನ್ನು ಸಿಬಿಐ ಬಲವಾಗಿ ನಿರಾಕರಿಸುತ್ತದೆ. ಜಿತೇಂದ್ರ ಕುಮಾರ್ ಅವರು ಈ ಪ್ರಕರಣದ ತನಿಖೆಯೊಂದಿಗೆ ಯಾವುದೇ ರೀತಿಯ ಸಂಬಂಧ ಹೊಂದಿರಲಿಲ್ಲ. ಅವರು ಪ್ರಾಸಿಕ್ಯೂಷನ್ ಉಸ್ತುವಾರಿ ಉಪ ಕಾನೂನು ಸಲಹೆಗಾರರಾಗಿದ್ದರು. ಅವರು ಈಗಾಗಲೇ ಚಾರ್ಜ್ ಶೀಟ್ ಮಾಡಿರುವ ಪ್ರಕರಣ ತನಿಖೆ ನಡೆಸುತ್ತಿರುವ ಪ್ರಾಸಿಕ್ಯೂಟರ್‌ಗಳನ್ನು ಮೇಲ್ವಿಚಾರಣೆ ಮಾಡುವ ಸಾಮರ್ಥ್ಯ ಹೊಂದಿದ್ದರು ಎಂದು ಸಿಬಿಐ ತಿಳಿಸಿದೆ.
Advertisement
ಕಳೆದ ವಾರ ಜಿತೇಂದ್ರ ಕುಮಾರ್ ಅವರ ಮೃತದೇಹ ದಕ್ಷಿಣ ದೆಹಲಿಯ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ತಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿದ್ದ ಸೂಸೈಡ್ ನೋಟ್ ಅನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನಮಗೆ ದ್ರೋಹ ಬಗೆದ ಉದ್ಧವ್ ಠಾಕ್ರೆಗೆ ಪಾಠ ಕಲಿಸಬೇಕು: ಅಮಿತ್ ಶಾ ಗುಡುಗು