ನವದೆಹಲಿ: ಮನೀಶ್ ಸಿಸೋಡಿಯಾ ಅವರು ದೆಹಲಿಯ ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಮಾಡಿದ ಎಲ್ಲ ಕೆಲಸಗಳಿಂದ ಅವರು ಭಾರತ ರತ್ನಕ್ಕೆ ಅರ್ಹರಾಗಿದ್ದಾರೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಅಭಿಪ್ರಾಯಪಟ್ಟಿದ್ದಾರೆ.
ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಸೋಡಿಯಾ ಗುಣಮಟ್ಟದ ಸರ್ಕಾರಿ ಶಾಲೆಗಳನ್ನು ರೂಪಿಸಿ ಪವಾಡ ಮೆರೆದಿದ್ದಾರೆ. ಅಂತಹ ವ್ಯಕ್ತಿಗೆ ಭಾರತ ರತ್ನ ಸಿಗಬೇಕು. ಇಡೀ ದೇಶದ ಶಿಕ್ಷಣ ವ್ಯವಸ್ಥೆಯನ್ನೇ ಅವರ ಕೈಗೆ ಕೊಡಬೇಕು. ಬದಲಿಗೆ ಅವರ ವಿರುದ್ಧ ಸಿಬಿಐ ದಾಳಿ ನಡೆದಿದೆ. ಇದು ಬಿಜೆಪಿ ಅವರಿಗೇ ನಾಚಿಕೆ ಆಗಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ಸೇರಿ 8 ಆರೋಪಿಗಳ ವಿರುದ್ಧ ಸಿಬಿಐ ಲುಕ್‌ಔಟ್ ನೋಟಿಸ್
Advertisement
Advertisement
ಅಬಕಾರಿ ತನಿಖೆಯಲ್ಲಿ ಮನೀಶ್ ಸಿಸೋಡಿಯಾ ಅರೆಸ್ಟ್ ಆಗಬಹುದು. ಯಾರಿಗೆ ಗೊತ್ತು ನಾನು ಸಹ ಅರೆಸ್ಟ್ ಆಗಬಹುದು. ಇದೆಲ್ಲವೂ ಗುಜರಾತಿನ ಚುನಾವಣೆ ಗೆಲ್ಲಲು ಬಿಜೆಪಿ ಮಾಡುತ್ತಿರುವ ತಂತ್ರಗಳು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: 3-4 ದಿನಗಳಲ್ಲಿ ಸಿಬಿಐ-ಇಡಿ ನನ್ನ ಬಂಧಿಸಬಹುದು, ಯಾವುದಕ್ಕೂ ಹೆದರಲ್ಲ: ಮನೀಶ್ ಸಿಸೋಡಿಯಾ
Advertisement
मेरे पास भाजपा का संदेश आया है- “आप” तोड़कर भाजपा में आ जाओ, सारे CBI ED के केस बंद करवा देंगे
मेरा भाजपा को जवाब- मैं महाराणा प्रताप का वंशज हूँ, राजपूत हूँ। सर कटा लूँगा लेकिन भ्रष्टाचारियो-षड्यंत्रकारियोंके सामने झुकूँगा नहीं। मेरे ख़िलाफ़ सारे केस झूठे हैं।जो करना है कर लो
— Manish Sisodia (@msisodia) August 22, 2022
Advertisement
ಬಳಿಕ ಮಾತಮಾಡಿದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಕೇಜ್ರಿವಾಲ್ ನನ್ನ ಗುರು ಹಾಗೂ ಮಾರ್ಗದರ್ಶಕರು. ನಾನು ಸಿಎಂ ಆಗಲು ರಾಜಕೀಯಕ್ಕೆ ಬಂದಿಲ್ಲ. ಸಾರ್ವಜನಿಕರಿಗೆ ಒಳ್ಳೆಯದು ಮಾಡಲು ಬಂದಿದ್ದೇನೆ. ದೆಹಲಿಯಲ್ಲಿ ಕೇಜ್ರಿವಾಲ್ ಅವರು ಮಾಡುವ ಕೆಲಸಗಳನ್ನು ತಡೆಯುವುದಕ್ಕಾಗಿ ಅಬಕಾರಿ ನೀತಿ ತನಿಖೆಯನ್ನು ಮುನ್ನೆಲೆಗೆ ತರಲಾಗಿದೆ ಎಂದು ಕಿಡಿಕಾರಿದ್ದಾರೆ.
ಹೊಸ ಮದ್ಯನೀತಿಗೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ನಿವಾಸ ಮತ್ತು ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದರು. ದಾಳಿ ಬೆನ್ನಲ್ಲೇ ಆಮ್ ಅದ್ಮಿ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.