ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ (Liquor Policy Scam) ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದೆಹಲಿಯ ಉಪ ಮುಖ್ಯಮಂತ್ರಿ (Delhi Deputy Chief Minister) ಮನೀಶ್ ಸಿಸೋಡಿಯಾ (Manish Sisodia) ಅವರನ್ನು ದೆಹಲಿ ನ್ಯಾಯಾಲಯ 5 ದಿನಗಳ ವರೆಗೆ ಸಿಬಿಐ (CBI) ಕಸ್ಟಡಿಗೆ ನೀಡಿದೆ.
ಸಿಸೋಡಿಯಾ ಅವರು ಮದ್ಯ ಮಾರಾಟಗಾರರಿಗೆ ಅನಗತ್ಯ ಪ್ರಯೋಜನಗಳನ್ನು ನೀಡುತ್ತಿದ್ದಾರೆ. ಅಕ್ರಮವಾಗಿ ರಿಯಾಯಿತಿಯನ್ನು ನೀಡುತ್ತಿದ್ದಾರೆ ಹಾಗೂ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರ ಒಪ್ಪಿಗೆಯಿಲ್ಲದೇ ಅಬಕಾರಿ ನೀತಿಗಳನ್ನು ಬದಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಅಧಿಕಾರಿಗಳು ಭಾನುವಾರ ಬೆಳಗ್ಗೆಯಿಂದ ವಿಚಾರಣೆಗೆ ಒಳಪಡಿಸಿದ್ದರು. ಆದರೆ ಅವರು ವಿಚಾರಣೆ ವೇಳೆ ಸರಿಯಾಗಿ ಸಹಕರಿಸದೇ ಹಾರಿಕೆಯ ಉತ್ತರಗಳನ್ನು ನೀಡಿರುವುದರಿಂದ ಅವರನ್ನು ಸಿಬಿಐ ಬಂಧಿಸಿದೆ. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸದ್ಯಕ್ಕೆ ಟೋಲ್ ಸಂಗ್ರಹ ಇಲ್ಲ
ಸೋಮವಾರ ಸಿಸೋಡಿಯಾ ಅವರನ್ನು ಸಿಬಿಐ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಸಿಬಿಐ ಹಾಗೂ ಮನೀಶ್ ಸಿಸೋಡಿಯಾ ಪರ ವಕೀಲರ ವಾದ ಆಲಿಸಿದ ನ್ಯಾಯಾಲಯ ಸಿಸೋಡಿಯಾ ಅವರನ್ನು 5 ದಿನಗಳ ಸಿಬಿಐ ಕಸ್ಟಡಿಗೆ ಒಪ್ಪಿಸಿದೆ. ದೆಹಲಿ ಉಪಮುಖ್ಯಮಂತ್ರಿ ಮಾರ್ಚ್ 4ರ ವರೆಗೆ ಸಿಬಿಐ ಕಸ್ಟಡಿಯಲ್ಲಿ ಇರಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಕರ್ನಾಟಕಕ್ಕೆ ಅವಮಾನ, ಖರ್ಗೆಗೆ ಛತ್ರಿಯೇ ಸಿಗಲಿಲ್ಲ: ಮೋದಿ