– ದಿಲ್ಲಿ ಸರ್ಕಾರದ 18 ಖಾತೆಗಳನ್ನು ನಿರ್ವಹಿಸಿದ್ದ ನಾಯಕನ ಸೋಲಿಸಿದ ಬಿಜೆಪಿ ಅಭ್ಯರ್ಥಿ
ನವದೆಹಲಿ: ದೆಹಲಿ ವಿಧಾನಸಭಾ (Delhi Election Results) ಚುನಾವಣೆಯಲ್ಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ (Manish Sisodia) ಹೀನಾಯ ಸೋಲನುಭವಿಸಿದ್ದಾರೆ.
Advertisement
ಜಂಗ್‌ಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿಸೋಡಿಯಾ ವಿರುದ್ಧ ಬಿಜೆಪಿ ಅಭ್ಯರ್ಥಿ ತರ್ವೀಂದರ್ ಸಿಂಗ್ ಗೆಲುವು ಸಾಧಿಸಿದ್ದಾರೆ. ಕೇವಲ 636 ಮತಗಳ ಅಂತರದಿಂದ ಎಎಪಿ ಹಿರಿಯ ನಾಯಕ ಮುಖಭಂಗ ಅನುಭವಿಸಿದ್ದಾರೆ. ಇದನ್ನೂ ಓದಿ: ನಮ್ಮನ್ನು ಸೋಲಿಸಲು ಮೋದಿಗೆ ಇನ್ನೊಂದು ಜನ್ಮ ಬೇಕು ಎಂದಿದ್ದ ಕೇಜ್ರಿವಾಲ್‌ಗೆ ಸೋಲು
Advertisement
Advertisement
ಜಂಗ್‌ಪುರ ಕ್ಷೇತ್ರದಲ್ಲಿ ಸಿಂಗ್ ಸಮುದಾಯ ಪ್ರಾಬಲ್ಯ ಹೊಂದಿದೆ. ಅದೇ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಬಿಜೆಪಿ ರೂಪಿಸಿದ್ದ ತಂತ್ರಗಾರಿಕೆ ಕೆಲಸ ಮಾಡಿದೆ. ಇದೇ ಮೊದಲ ಬಾರಿಗೆ ಸ್ಪರ್ಧಿಸಿ ತರ್ವೀಂದರ್ ಸಿಂಗ್ ಗೆದ್ದು ಬೀಗಿದ್ದಾರೆ.
Advertisement
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮನೀಶ್ ಸಿಸೋಡಿಯಾ ಜೈಲು ಪಾಲಾಗಿದ್ದರು. ಹಲವು ತಿಂಗಳು ಜೈಲಲ್ಲಿ ಕಳೆದು ನಂತರ ರಿಲೀಸ್ ಆಗಿದ್ದರು. ದೆಹಲಿ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಿ ಸುಧಾರಣೆಗಳನ್ನು ತಂದ ಶ್ರೇಯ ಸಿಸೋಡಿಯಾಗೆ ಸಲ್ಲುತ್ತದೆ. ಆದರೆ, ನಂತರದ ದಿನಗಳಲ್ಲಿ ದೆಹಲಿ ಸರ್ಕಾರದ ವಿರುದ್ಧ ಕೇಳಿಬಂದ ಹಗರಣಗಳ ಆರೋಪವು ಎಎಪಿ ಮುಳುವಿಗೆ ಕಾರಣವಾಯಿತು. ಇದನ್ನೂ ಓದಿ: ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಹೀನಾಯ ಸೋಲು
ಕೇಜ್ರಿವಾಲ್ ನೇತೃತ್ವದ ಸರ್ಕಾರದಲ್ಲಿ ಗೃಹ, ಹಣಕಾಸು, ಶಿಕ್ಷಣ, ಆರೋಗ್ಯ, ಲೋಕೋಪಯೋಗಿ ಇಲಾಖೆ, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಸೇರಿದಂತೆ 18 ಪ್ರಮುಖ ಖಾತೆಗಳನ್ನು ಸಿಸೋಡಿಯಾ ನಿರ್ವಹಿಸುತ್ತಿದ್ದರು. ಸರ್ಕಾರವನ್ನು ತಮ್ಮ ಹೆಗಲ ಮೇಲೆ ಹೊತ್ತು ಯಶಸ್ವಿಯಾಗಿ ನಿರ್ವಹಿಸಿದ್ದರು. ಕೇಜ್ರಿವಾಲ್ ಅವರ ಅತ್ಯಂತ ವಿಶ್ವಾಸಾರ್ಹ ಸಹಾಯಕ ಆಗಿದ್ದರು.