ನವದೆಹಲಿ: ಹೊಸ ಅಬಕಾರಿ ನೀತಿಯಲ್ಲಿ (Liquor Scam Case) ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ (Manish Sisodia) ಅವರು ಶನಿವಾರ ತಮ್ಮ ಅನಾರೋಗ್ಯ ಪೀಡಿತ ಪತ್ನಿಯನ್ನು ಭೇಟಿಯಾದರು. ಕೋರ್ಟ್ ಅನುಮತಿ ಪಡೆದಿದ್ದ ಅವರು ತಮ್ಮ ನಿವಾಸಕ್ಕೆ ಆಗಮಿಸಿ ಪತ್ನಿಯ ಆರೋಗ್ಯ ವಿಚಾರಿಸಿದರು.
ನ್ಯಾಯಂಗ ಬಂಧನದ ಹಿನ್ನೆಲೆ ತಿಹಾರ್ ಜೈಲಿನಲ್ಲಿರುವ (Tihar Jail) ಸಿಸೋಡಿಯಾಗೆ ದೆಹಲಿ ನ್ಯಾಯಾಲಯವು ಶುಕ್ರವಾರ ಬೆಳಿಗ್ಗೆ 10 ರಿಂದ ಸಂಜೆ 5 ರ ವರೆಗೆ ಪತ್ನಿಯನ್ನು ಭೇಟಿಯಾಗಲು ಅನುಮತಿ ನೀಡಿತ್ತು. ಈ ಅವಧಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡದಂತೆ ಅಥವಾ ಯಾವುದೇ ರಾಜಕೀಯ ಚಟುವಟಿಕೆಯಲ್ಲಿ ಪಾಲ್ಗೊಳ್ಳದಂತೆ ನ್ಯಾಯಾಲಯ ಅವರಿಗೆ ಆದೇಶಿಸಿತ್ತು. ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಪ್ರಕರಣ – CBIನಿಂದ ಡಿಸಿಎಂ ಮನೀಶ್ ಸಿಸೋಡಿಯಾ ಅರೆಸ್ಟ್
Advertisement
Advertisement
ಇದಕ್ಕೂ ಮುನ್ನ ಸಿಸೋಡಿಯಾ ತಮ್ಮ ಪತ್ನಿಯನ್ನು ಭೇಟಿ ಮಾಡಲು ಐದು ದಿನಗಳ ಕಾಲ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ತಮ್ಮ ಪತ್ನಿ ಮಲ್ಟಿಪಲ್ ಸ್ಕ್ಲೆರೋಸಿಸ್ ಮತ್ತು ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಹೇಳಿಕೊಂಡಿದ್ದರು. ಸಿಸೋಡಿಯಾ ಅವರ ಪತ್ನಿ ಕಳೆದ 20 ವರ್ಷಗಳಿಂದ ಮಲ್ಟಿಪಲ್ ಸ್ಕ್ಲೆರೋಸಿಸ್‌ನಿಂದ ಬಳಲುತ್ತಿದ್ದರು ಎಂದು ನ್ಯಾಯಾಲಯ ಗಮನಿಸಿದೆ.
Advertisement
ಸಿಸೋಡಿಯಾ ಅವರು ಫೆಬ್ರವರಿಯಲ್ಲಿ ಸಿಬಿಐನಿಂದ ಬಂಧಿಸುವ ಮೊದಲು ಅರವಿಂದ್ ಕೇಜ್ರಿವಾಲ್ ಸರ್ಕಾರದಲ್ಲಿ ಅಬಕಾರಿ ಇಲಾಖೆ ಸೇರಿದಂತೆ ವಿವಿಧ ಖಾತೆಗಳ ಜೊತೆಗೆ ಉಪಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದರು. ಬಂಧನಕ್ಕೊಳಗಾದ ನಂತರ ಅವರು ಉಪಮುಖ್ಯಮಂತ್ರಿ ಮತ್ತು ವಿವಿಧ ಇಲಾಖೆಗಳ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದನ್ನೂ ಓದಿ: Manish Sisodia ಸಿಬಿಐ ಕಸ್ಟಡಿ ವಿಸ್ತರಣೆ – ಮಾ.10 ರಂದು ಜಾಮೀನು ಅರ್ಜಿ ವಿಚಾರಣೆ
Advertisement
ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡಲು ದೆಹಲಿ ಸರ್ಕಾರದ 2021-22 ರ ಅಬಕಾರಿ ನೀತಿಯು ಕಾರ್ಟೆಲೈಸೇಶನ್‌ಗೆ ಅವಕಾಶ ಮಾಡಿಕೊಟ್ಟಿದೆ ಮತ್ತು ಅದಕ್ಕಾಗಿ ಕೆಲವು ಡೀಲರ್‌ಗಳಿಂದ ಲಂಚ ಪಡೆದಿರುವುದಾಗಿ ಆರೋಪಿಸಲಾಗಿದೆ. ಇದನ್ನು ಆಮ್ ಆದ್ಮಿ ಪಕ್ಷ ನಿರಾಕರಿಸಿದೆ. ತರುವಾಯ ನೀತಿಯನ್ನು ರದ್ದುಗೊಳಿಸಲಾಯಿತು. ಈ ಬೆಳವಣಿಗೆ ಬಳಿಕ ದೆಹಲಿ ಲೆಫ್ಟಿನೆಂಟ್ ಗವರ್ನರ್ ಸಿಬಿಐ ತನಿಖೆಗೆ ಶಿಫಾರಸು ಮಾಡಿದರು. ನಂತರ ಇಡಿ PMLA ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿತು.