ನವದೆಹಲಿ: ಕಾಂಗ್ರೆಸ್‍ನಂತೆಯೇ ಅಳುವುದನ್ನು ನಿಲ್ಲಿಸಿ. ನಿಮಗೆ ಧೈರ್ಯವಿದ್ದರೇ ಓಡಿಹೋಗದೆ ನಮ್ಮೊಂದಿಗೆ ಹೋರಾಡಿ ಎಂದು ಬಿಜೆಪಿಗೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸವಾಲು ಹಾಕಿದ್ದಾರೆ.
ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣೆಯ ವಿಳಂಬದ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಅವರು, ಎಂಸಿಡಿ ಚುನಾವಣೆಗೆ ಸ್ಪರ್ಧಿಸಿ, ನಮ್ಮೊಂದಿಗೆ ಹೋರಾಡಿ. ನೀವು 10 ಸ್ಥಾನಗಳನ್ನು ಗಳಿಸಲು ಸಾಧ್ಯವಾದರೆ ಅದು ನಿಮ್ಮ ದೊಡ್ಡ ಸಾಧನೆಯಾಗಲಿದೆ ಎಂದು ವ್ಯಂಗ್ಯವಾಡಿದ್ದಾರೆ.
ಇದಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ದೆಹಲಿಯಲ್ಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗಳನ್ನು ಮುಂದೂಡಿದ ಬಗ್ಗೆ ನಿರಾಶೆ ವ್ಯಕ್ತಪಡಿಸಿದರು. ಕೇಂದ್ರವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‍ಗೆ ಹೀನಾಯ ಸೋಲು – ಬಿಜೆಪಿಗಿಂತಲೂ, ಕಾಂಗ್ರೆಸ್‍ಗೆ ಡೇಂಜರ್ ಆ ಪಕ್ಷ!
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು, ದೆಹಲಿ ಸರ್ಕಾರವು ಎಂಸಿಡಿ ಉದ್ಯೋಗಿಗಳಿಗೆ 13,000 ಕೋಟಿ ರೂ.ಗಳನ್ನು ವಂಚಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು. ಇದನ್ನೂ ಓದಿ: ರೈತರ ಬೇಡಿಕೆ ಈಡೇರಿಸದಿದ್ದರೆ ಆಗುತ್ತೆ ಹಿಂಸಾಚಾರ: ಮೇಘಾಲಯ ರಾಜ್ಯಪಾಲ ಎಚ್ಚರಿಕೆ
ರಾಜ್ಯ ಚುನಾವಣಾ ಆಯುಕ್ತ ಎಸ್.ಕೆ. ಶ್ರೀವಾಸ್ತವ ಅವರು, ಕೇಂದ್ರ ಸರ್ಕಾರವು ಚುನಾವಣಾ ಆಯೋಗವು ಕಾನೂನುಬದ್ಧವಾಗಿ ಪರಿಶೀಲಿಸಬೇಕಾದ ಕೆಲವು ವಿಷಯಗಳನ್ನು ಪ್ರಸ್ತಾಪಿಸಿದ ನಂತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಚುನಾವಣಾ ದಿನಾಂಕಗಳ ಘೋಷಣೆಯನ್ನು ಕೇಂದ್ರವು ಮುಂದೂಡಿದೆ ಎಂದು ಮಾಹಿತಿ ನೀಡಿದ್ದರು.