ಮುಂಬೈ: ವಿ.ಡಿ.ಸಾವರ್ಕರ್ ಬದಲಿಗೆ ಮಹಾತ್ಮಾ ಗಾಂಧಿಯನ್ನು ಹತ್ಯೆಗೈದ ನಾಥೂರಾಮ್ ಗೋಡ್ಸೆಗೆ ಭಾರತ ರತ್ನ ನೀಡಿ ಎಂದು ಬಿಜೆಪಿಗೆ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಟಾಂಗ್ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಎನ್‍ಡಿಎ ಪ್ರಣಾಳಿಕೆಯಲ್ಲಿ ವಿನಾಯಕ್ ದಾಮೋದರ್ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವುದಾಗಿ ಬಿಜೆಪಿ ಘೋಷಿಸಿದ್ದು, ಇದಕ್ಕೆ ಮನೀಶ್ ತಿವಾರಿ ಅವರು ತಿರುಗೇಟು ನೀಡಿದ್ದಾರೆ. ಸಾವರ್ಕರ್ ಬದಲಿಗೆ ಗಾಂಧಿ ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಎಂದು ಹರಿಹಾಯ್ದಿದ್ದಾರೆ.
Advertisement
Why does NDA/BJP Government want to confer Bharath Ratna on Savarkar why not Godse? Former was only chargesheeted & later acquitted for assassination of Gandhi while latter was convicted & hanged.On his 150 th Anniv if you want to defile his memory then go the whole nine yards?
— Manish Tewari (@ManishTewari) October 17, 2019
Advertisement
ಸಾವರ್ಕರ್ ಅವರು ಮಹಾತ್ಮಾ ಗಾಂಧಿ ಹತ್ಯೆಗೆ ಸಂಚು ರೂಪಿಸಿದ್ದರು ಎಂದು ಆರೋಪಿಸಲಾಗಿದೆ. ಆದರೆ ನಾಥೂರಾಮ್ ಗೋಡ್ಸೆ ಹತ್ಯೆ ಮಾಡಿದ್ದಾರೆ. ಈ ವರ್ಷ ನಾವು ಮಹಾತ್ಮಾ ಗಾಂಧಿಯವರ 150ನೇ ಜನ್ಮದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ಎನ್‍ಡಿಎ ಸರ್ಕಾರವು ಸಾವರ್ಕರ್ ಬದಲಿಗೆ ನೇರವಾಗಿ ಗೋಡ್ಸೆಗೆ ಭಾರತರತ್ನ ನೀಡಬೇಕು ಎಂದು ಹೇಳುವ ಮೂಲಕ ವ್ಯಂಗ್ಯವಾಗಿ ಕಿಡಿಕಾರಿದರು.
Advertisement
ಇದಕ್ಕೂ ಮುನ್ನ ಬುಧವಾರ ಕಾಂಗ್ರೆಸ್ ಮುಖಂಡ ರಶೀದ್ ಅಲ್ವಿ ಕೂಡ ಸಾವರ್ಕರ್ ಅವರ ನಂತರ ಭಾರತ ರತ್ನಕ್ಕೆ ಮುಂದಿನ ಹೆಸರು ಗೋಡ್ಸೆ ಇರಬಹುದು ಎಂದು ಎನ್‍ಡಿಎ ಪ್ರಣಾಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
Advertisement
ಸಾವರ್ಕರ್ ಅವರ ಇತಿಹಾಸ ಎಲ್ಲರಿಗೂ ತಿಳಿದಿದೆ. ಸಾವರ್ಕರ್ ಅವರು ಗಾಂಧಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದರು. ಸಾಕ್ಷ್ಯಾಧಾರದ ಕೊರತೆಯಿಂದ ಅವರನ್ನು ಬಿಡುಗಡೆ ಮಾಡಲಾಯಿತು. ಇಂದು ಈ ಸರ್ಕಾರ ಅವರಿಗೆ ಭಾರತ ರತ್ನ ನೀಡುವುದಾಗಿ ಘೋಷಿಸಿದೆ. ಮುಂದಿನ ಸಾಲಿನಲ್ಲಿ ಗೋಡ್ಸೆ ಇರಬಹುದು ಎಂದು ಅಲ್ವಿ ಹೇಳಿದ್ದರು.
ಇತ್ತೀಚೆಗೆ ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಪ್ರಣಾಳಿಕೆಯಲ್ಲಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿರುವ ಭಾರತ ರತ್ನವನ್ನು ಜ್ಯೋತಿರಾವ್ ಪುಲೆ, ಸಾವಿತ್ರಿಬಾಯಿ ಪುಲೆ ಹಾಗೂ ವೀರ್ ಸಾವರ್ಕರ್ ಅವರಿಗೆ ನೀಡುವ ಕುರಿತು ಪ್ರಸ್ತಾಪಿಸಿದೆ.