ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ರಾಷ್ಟ್ರಪತಿಯ ದೃಷ್ಟಿ ತೆಗೆದ ಮಂಜಮ್ಮ ಜೋಗತಿ!

Public TV
1 Min Read
manjamma jogati

ನವದೆಹಲಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕರ್ನಾಟಕದ ಹಲವರಿಗೆ ಮಂಗಳವಾರ 2021ನೇ ಸಾಲಿನ ಪದ್ಮಶ್ರೀ, ಪದ್ಮವಿಭೂಷಣ, ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೋಗತಿ ನೃತ್ಯದ ಮೂಲಕ ಮನೆಮಾತಾಗಿರುವ ಮಂಜಮ್ಮ ಜೋಗತಿ ಅವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರ ದೃಷ್ಟಿ ತೆಗೆದು ಗಮನ ಸೆಳೆದರು.

manjamma jogati 1

ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅವರು ದೃಷ್ಟಿ ತೆಗೆಯುವಾಗ ರಾಷ್ಟ್ರಪತಿಗಳು ಸಂತೋಷದಿಂದ ನಗೆ ಬೀರಿದರು. ನಂತರ ಮಂಜಮ್ಮ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದನೆ ತಿಳಿಸಿದರು. ಪದ್ಮಶ್ರೀ ಪ್ರಶಸ್ತಿ ಪಡೆದ ಮೊದಲ ತೃತೀಯಲಿಂಗಿ ಎಂಬ ಹೆಗ್ಗಳಿಕೆಗೂ ಮಂಜಮ್ಮ ಜೋಗತಿ ಪಾತ್ರರಾಗಿದ್ದಾರೆ. ಇದನ್ನೂ ಓದಿ: ನ.11 ಕ್ಕೆ ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆಗೆ ಸರ್ಕಾರ ಆದೇಶ

spb son

2021ರ ಸಾಲಿನ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ ದೆಹಲಿಯ ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‍ನಲ್ಲಿ ನಡೆಯಿತು. ಕರ್ನಾಟಕದ ಖ್ಯಾತ ವೈದ್ಯ ಡಾ. ಬಿ.ಎಂ.ಹೆಗ್ಡೆ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಗಾಯಕ ದಿವಂಗತ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರ ಪದ್ಮವಿಭೂಷಣ ನೀಡಲಾಯಿತು. ಪ್ರಶಸ್ತಿಯನ್ನು ಎಸ್‌ಪಿಬಿ ಪರವಾಗಿ ಪುತ್ರ ಚರಣ್‌ ಸ್ವೀಕರಿಸಿದರು. ಇದನ್ನೂ ಓದಿ: ಹಾಟ್ ಬೆಡಗಿ ಪೂನಂ ಪಾಂಡೆ ಆಸ್ಪತ್ರೆಗೆ ದಾಖಲು

padma scaled

ಸಾಹಿತಿ ಚಂದ್ರಶೇಖರ ಕಂಬಾರರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಹಿತ್ಯ ಮತ್ತು ಸಮಾಜ ಸೇವೆಗಾಗಿ ಎಲ್‌.ಎಸ್.ಕಶ್ಯಪ್ ಅವರಿಗೂ ಪದ್ಮಶ್ರೀ ಪ್ರಶಸ್ತಿಯನ್ನು ರಾಷ್ಟ್ರಪತಿಗಳು ಪ್ರದಾನ ಮಾಡಿದರು.

Share This Article