ಮಲಯಾಳಂನಲ್ಲಿ ಇತ್ತೀಚೆಗೆ ತೆರೆಕಂಡ ‘ಮಂಜುಮ್ಮೆಲ್ ಬಾಯ್ಸ್’ (Manjummel Boys) ಇದೀಗ ಸಂಕಷ್ಟ ಎದುರಾಗಿದೆ. ಈ ಚಿತ್ರದಲ್ಲಿ ತಾವು ಸಂಗೀತ ಸಂಯೋಜನೆ ಮಾಡಿದ್ದ ‘ಕಣ್ಮಣಿ’ ಹಾಡನ್ನು ಬಳಸಲಾಗಿದೆ ಎಂದು ಸಂಗೀತ ಮಾಂತ್ರಿಕ ಇಳಯರಾಜ (Ilaiyaraja) ಕಾನೂನು ಸಮರ ಸಾರಿದ್ದಾರೆ. ತಮ್ಮ ಹಾಡು ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದಲ್ಲಿ ಬಳಕೆ ಆಗಿದೆ ಎಂದು ಚಿತ್ರದ ನಿರ್ಮಾಪಕರಿಗೆ ನೋಟಿಸ್ ನೀಡಿದ್ದಾರೆ.
Advertisement
ಕಮಲ್ ಹಾಸನ್ ನಟನೆಯ ‘ಗುಣ’ (Guna) ಸಿನಿಮಾ ರಿಲೀಸ್ ಆಗಿದ್ದು 1991ರಲ್ಲಿ. ಈ ಚಿತ್ರಕ್ಕೆ ಇಳಯರಾಜ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಈ ಸಿನಿಮಾದ ‘ಕಣ್ಮಣಿ ಅನ್ಬೊದು’ ಹಾಡು ಗಮನ ಸೆಳೆದಿತ್ತು. ಈ ಹಾಡು ‘ಮಂಜುಮ್ಮೇಲ್ ಬಾಯ್ಸ್’ನಲ್ಲಿ ಬಳಕೆ ಆಗಿದೆ. ಆದರೆ, ಇದನ್ನು ಅಕ್ರಮವಾಗಿ ಬಳಕೆ ಮಾಡಿದ್ದಾರೆ ಎಂದು ಇಳಯರಾಜ ಆರೋಪಿಸಿದ್ದಾರೆ. ಇದನ್ನೂ ಓದಿ:ಮತ್ತೆ ಡೈರೆಕ್ಟರ್ ಶಶಾಂಕ್ ಜೊತೆ ಕೈಜೋಡಿಸಿದ ಡಾರ್ಲಿಂಗ್ ಕೃಷ್ಣ
Advertisement
Advertisement
‘ಮಂಜುಮ್ಮೇಲ್ ಬಾಯ್ಸ್’ ನಿರ್ಮಾಣ ಮಾಡಿದ್ದ ಸೌಬಿನ್ ಶಾಹಿರ್ ಅವರಿಗೆ ಇಳಯರಾಜ ಕಡೆಯಿಂದ ನೋಟಿಸ್ ಹೋಗಿದೆ. ‘ಕಣ್ಮಣಿ ಅನ್ಬೋದು ಕಾದಲನ್’ ಹಾಡಿನ ಹಕ್ಕು ನಮ್ಮದು ಎಂದು ಅವರು ಹೇಳಿದ್ದಾರೆ. ಕಣ್ಮಣಿ ಹಾಡನ್ನು ಅಕ್ರಮವಾಗಿ ಬಳಕೆ ಮಾಡಲಾಗಿದ್ದು, ಇಳಯರಾಜ ಅವರು ಈ ಹಾಡಿನ ಸಂಪೂರ್ಣ ಹಕ್ಕನ್ನು ಹೊಂದಿದ್ದಾರೆ ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ.
Advertisement
ಈ ಎಲ್ಲಾ ಸಂಗೀತ ಕೃತಿಗಳ ಮೇಲೆ ನೈತಿಕ ಹಕ್ಕುಗಳನ್ನು ಒಳಗೊಂಡಂತೆ ಸಂಪೂರ್ಣ ಹಕ್ಕುಗಳನ್ನು ಹೊಂದಿದ್ದಾರೆ. ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದ ನಿರ್ಮಾಪಕರಿಗೆ ಸಂಗೀತ ಸಂಯೋಜಕರ ಅನುಮತಿ ಪಡೆಯಿರಿ ಅಥವಾ 15 ದಿನಗಳಲ್ಲಿ ಪರಿಹಾರವನ್ನು ಪಾವತಿಸುವಂತೆ ಜೊತೆಗೆ ಚಿತ್ರದಿಂದ ಹಾಡನ್ನು ತೆಗೆದು ಹಾಕುವಂತೆ ನೋಟಿಸ್ನಲ್ಲಿ ಸೂಚನೆ ನೀಡಿದ್ದಾರೆ ಇಳಯರಾಜ ಪರ ವಕೀಲರು. ಎರಡು ಆಯ್ಕೆಯಲ್ಲಿ ಒಂದನ್ನು ಪಾಲಿಸದಿದ್ದರೆ ಅವರ ವಿರುದ್ಧ ನೋಟಿಸ್ ನೀಡೋದಾಗಿ ಎಚ್ಚರಿಕೆ ನೀಡಿದ್ದಾರೆ.