ಅನಧಿಕೃತವಾಗಿ ಹಾಡು ಬಳಸಿದಕ್ಕೆ ‘ಮಂಜುಮ್ಮೆಲ್ ಬಾಯ್ಸ್’ ಚಿತ್ರತಂಡ ಇದೀಗ ಇಳಯರಾಜಗೆ 60 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಇಳಯರಾಜ (Ilaiyaraaja) ಸಂಗೀತ ಸಂಯೋಜನೆಯ ‘ಕಣ್ಮಣಿ’ ಹಾಡನ್ನು ಬಳಸಿದಕ್ಕೆ ಇದೀಗ ದುಬಾರಿ ಹಣವನ್ನು ದಂಡ ತೆತ್ತಿದ್ದಾರೆ. ಇದನ್ನೂ ಓದಿ:ಸತತ ಸಿನಿಮಾಗಳ ಸೋಲಿನ ಬೆನ್ನಲ್ಲೇ ಬಿಗ್ ಚಾನ್ಸ್ ಬಾಚಿಕೊಂಡ ಕೃತಿ ಶೆಟ್ಟಿ
‘ಮಂಜುಮ್ಮೆಲ್ ಬಾಯ್ಸ್’ (Manjummel Boys) ಸಿನಿಮಾದಲ್ಲಿ ಅನಧಿಕೃತವಾಗಿ ಹಾಡು ಬಳಸಿದ ಹಿನ್ನೆಲೆ 2 ಕೋಟಿ ರೂ. ಪರಿಹಾರ ನೀಡಬೇಕೆಂದು ಇಳಯರಾಜ ಕೇಳಿದ್ದರು. ಬಳಿಕ ಅವರನ್ನು ಚಿತ್ರದ ನಿರ್ಮಾಪಕರು ವೈಯಕ್ತಿಕವಾಗಿ ಭೇಟಿಯಾಗಿ ಮಾತಕತೆಯ ಬಳಿಕ ಒಪ್ಪಂದದಂತೆ 60 ಲಕ್ಷ ರೂ. ಇಳಯರಾಜಗೆ ಪಾವತಿಸಿದ್ದಾರೆ.
ಅಂದಹಾಗೆ, ಕಮಲ್ ಹಾಸನ್ ನಟನೆಯ ‘ಗುಣ’ ಸಿನಿಮಾ ರಿಲೀಸ್ ಆಗಿದ್ದು 1991ರಲ್ಲಿ. ಈ ಚಿತ್ರಕ್ಕೆ ಇಳಯರಾಜ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಈ ಸಿನಿಮಾದ ‘ಕಣ್ಮಣಿ ಅನ್ಬೋಡು’ ಹಾಡು ಗಮನ ಸೆಳೆದಿತ್ತು. ಈ ಹಾಡನ್ನು ‘ಮಂಜುಮ್ಮೆಲ್ ಬಾಯ್ಸ್’ ತಂಡ ಅನುಮತಿ ಇಲ್ಲದೇ ಚಿತ್ರದಲ್ಲಿ ಬಳಸಿದ್ದರು. ಈ ಬೆನ್ನಲ್ಲೇ ಚಿತ್ರತಂಡಕ್ಕೆ ಇಳಯರಾಜ ನೋಟಿಸ್ ನೀಡಿದ್ದರು.