ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ (Kyasanur Forest Disease (KFD) 9 ಜನ ಸಾವನ್ನಪ್ಪಿದ್ದು, ಶೀಘ್ರವೇ ಪರಿಹಾರ ನೀಡುವಂತೆ ಸರ್ಕಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ (Mankala Vaidya) ಆಗ್ರಹಿಸಿದ್ದಾರೆ.
ಇಂದು ಕಾರವಾರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಜಿಲ್ಲಾ ಉಸ್ತುವಾರಿ ಸಚಿವರು ಮಂಗನಕಾಯಿಲೆಯಿಂದ ಮೃತರಾದವರಿಗೆ ಅರಣ್ಯ ಇಲಾಖೆ ಪರಿಹಾರ ನೀಡಬೇಕು ಎಂದು ಸೂಚಿಸಿದರು.
Advertisement
Advertisement
ಒಟ್ಟು 112 ಜನ ಅನಾರೋಗ್ಯಕ್ಕೊಳಗಾಗಿದ್ದರು. ಈ ಹಿಂದೆ ಸಾವು ಕಂಡವರಿಗೆ ಸರ್ಕಾರ ಪರಿಹಾರ ನೀಡಿತ್ತು. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾವಾದವರಿಗೆ ಯಾವುದೇ ಪರಿಹಾರ ನೀಡಿರಲಿಲ್ಲ. ಈ ಬಾರಿ ಕೂಡ 9 ಮಂದಿ ಬಲಿಯಾಗಿದ್ದಾರೆ. ಹೀಗಿದ್ದರೂ ಪರಿಹಾರ ಮಾತ್ರ ಮರೀಚಿಕೆಯಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ತೆಪ್ಪ ಮುಳುಗಿ ಮೂವರು ಪ್ರವಾಸಿಗರು ದುರ್ಮರಣ