ಭಾರತದ ಆರ್ಥಿಕ ಕ್ರಾಂತಿಯ ಹರಿಕಾರ, ವಿಶ್ವ ಕಂಡ ಮಹಾನ್ ಆರ್ಥಿಕ ತಜ್ಞ, ಭಾರತದ 13ನೇ ಪ್ರಧಾನಿಯಾಗಿದ್ದ ಡಾ.ಮನಮೋಹನ್ ಸಿಂಗ್ (Manmohan Singh) ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 19 ವರ್ಷದ ಸಿಂಗ್, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಇಹಲೋಹ ತ್ಯಜಿಸಿದ್ದಾರೆ. ಶುಕ್ರವಾರ ರಾತ್ರಿ 8:06ರ ಸುಮಾರಿಗೆ ಆಸ್ಪತ್ರೆಗೆ ದಾಖಲಾದ ಮನಮೋಹನ್ ಸಿಂಗ್ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ 9:51ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
1932ರ ಸೆಪ್ಟೆಂಬರ್ 26ರಂದು ಅವಿಭಜಿತ ಭಾರತದ ಪಂಜಾಬ್ (Punjab) ಪ್ರಾಂತ್ಯ ಗಹ್‌ನಲ್ಲಿ ಮನಮೋಹನ್ ಸಿಂಗ್ ಅವರು ನಿಖ್ ಕುಟುಂಬದಲ್ಲಿ ಜನಿಸಿದರು. ಚಿಕ್ಕವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡ ಸಿಂಗ್, ತಂದೆ ಹಾಗೂ ಅಜ್ಜಿಯ ಆರೈಕೆಯಲ್ಲಿ ಬೆಳೆದರು.
ಅವರ ಜೀವನದ ಮೊದಲ ಹನ್ನೆರಡು ವರ್ಷಗಳಲ್ಲಿ ಅವರಿದ್ದ ಹಳ್ಳಿಗೆ ವಿದ್ಯುತ್ ಸೌಲಭ್ಯ ಇರಲಿಲ್ಲ. ಅವರು ದೀಪದ ಬೆಳಕಿನಲ್ಲಿ ಅಧ್ಯಯನ ಮಾಡಿದ್ದರು. 14 ನೇ ವಯಸ್ಸಿನಲ್ಲಿ, ಸಿಂಗ್ ಅವರ ಕುಟುಂಬವು ವಿಭಜನೆಯ ನಂತರ ಭಾರತಕ್ಕೆ ವಲಸೆ ಬಂದು ಅಮೃತಸರದಲ್ಲಿ ವಾಸಿಸುತ್ತಿತ್ತು. ಇದನ್ನೂ ಓದಿ: ಪಾಕ್ ಪ್ರಧಾನಿ ಜೊತೆ ವಿಶ್ವಕಪ್ ವೀಕ್ಷಣೆ – ಇಂಡೋ -ಪಾಕ್ ಕ್ರಿಕೆಟ್‌ಗೆ ಮತ್ತೆ ಚಾಲನೆ ನೀಡಿದ್ದ ಸಿಂಗ್!
ಉರ್ದು (Urdu) ಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದ ಇವರು ಪಂಜಾಬ್ ವಿಶ್ವವಿದ್ಯಾನಿಲಯದಿಂದ 1952ರಲ್ಲಿ ಪದವಿ ಹಾಗೂ 1954 ರಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1957ರಲ್ಲಿ ಕೆಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದಲ್ಲಿ ಆನರ್ಸ್ ಪದವಿ ಪಡೆದರು. ನಂತರ 1962ರಲ್ಲಿ ಆಕ್ಸ್‌ಫರ್ಡ್ ವಿವಿಯಲ್ಲಿ ಡಾಕ್ಟರೇಟ್ ಪಡೆದರು. 1958ರಲ್ಲಿ ಇತಿಹಾಸ ಪ್ರಾಧ್ಯಾಪಕಿ ಹಾಗೂ ಲೇಖಕಿ ಗುರುಶರಣ್ ಕೌರ್ ಅವರನ್ನು ವಿವಾಹವಾದರು. ಅವರಿಗೆ ಮೂವರು ಪುತ್ರಿಯರು ಇದ್ದಾರೆ.
ವಿನಮ್ರತೆಯ ಸಾಕಾರಮೂರ್ತಿಯಾಗಿದ್ದ ಮನಮೋಹನ್ ಸಿಂಗ್ ಅವರು, ಡಾಕ್ಟರೇಟ್ ಮುಗಿಸಿದ ನಂತರ ಪಂಜಾಬ್ ವಿವಿ ಹಾಗೂ ದೆಹಲಿಯ ಸ್ಕೂಲ್ ಆಫ್ ಎಕಾನಮಿಕ್ಸ್‌ನಲ್ಲಿ ಅಂತರರಾಷ್ಟ್ರೀಯ ವ್ಯಾಪಾರದ ಪ್ರಾಧ್ಯಾಪಕರಾಗಿದ್ದರು. ಯುಎನ್‌ಸಿಟಿಎಡಿ ಸಚಿವಾಲಯದಲ್ಲಿ ಕೆಲಕಾಲ ಸೇವೆ ಸಲ್ಲಿಸಿದರು.