ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವ್ಹೀಲ್ ಚೇರ್‌ನಲ್ಲಿ ಆಗಮಿಸಿ ಮತ ಚಲಾಯಿಸಿದರು.
ಭಾರತದ ನೂತನ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಇಂದು ದೇಶಾದ್ಯಂತ ಸಂಸತ್ತಿನಲ್ಲಿ ಮತ್ತು ರಾಜ್ಯ ಶಾಸಕಾಂಗಗಳಲ್ಲಿ ರಹಸ್ಯ ಮತದಾನದ ಮೂಲಕ ಮತದಾನ ನಡೆಯಿತು. ಈ ಸಂದರ್ಭದಲ್ಲಿ 89 ವರ್ಷದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸಂಸತ್ ಭವನಕ್ಕೆ ವ್ಹೀಲ್ ಚೇರ್ ಮೂಲಕ ಬಂದು ಮತವನ್ನು ಹಾಕಿದರು. ಅವರಿಗೆ ಮತ ಚಲಾಯಿಸಲು ನಾಲ್ವರು ಅಧಿಕಾರಿಗಳು ಸಹಾಯ ಮಾಡಿದರು.
Advertisement
Advertisement
ಈ ವೀಡಿಯೋವನ್ನು ಕಾಂಗ್ರೆಸ್‍ನ ಅನೇಕ ನಾಯಕರು ಹಂಚಿಕೊಂಡಿದ್ದು, ಮನಮೋಹನ್ ಸಿಂಗ್ ಅವರು ಆದಷ್ಟು ಬೇಗ ಉತ್ತಮ ಆರೋಗ್ಯವನ್ನು ಮರಳಿ ಪಡೆಯಲಿ. ಅವರನ್ನು ಈ ರೀತಿ ನೋಡಲು ಬೇಸರವಾಗಿದೆ ಎಂದಿದ್ದಾರೆ.
Advertisement
खराब स्वास्थ्य के बाबजूद अपनी लोकतांत्रिक जिम्मेदारी निभाने के लिए संसद पहुंचे सरदार मनमोहन सिंह जी हम सभी के लिए प्रेरणा है।
ईश्वर उन्हें बेहतर स्वास्थ्य एवं लंबी आयु प्रदान करें ???????? pic.twitter.com/Odz5WVHS5c
— Srinivas BV (@srinivasiyc) July 18, 2022
ಆರೋಗ್ಯ ಹದಗೆಟ್ಟಿದ್ದರೂ ಪ್ರಜಾಸತ್ತಾತ್ಮಕ ಜವಾಬ್ದಾರಿಯನ್ನು ಪೂರೈಸಲು ಸಂಸತ್ತನ್ನು ತಲುಪಿದ ಮನಮೋಹನ್ ಸಿಂಗ್ ಅವರು ನಮಗೆಲ್ಲ ಸ್ಫೂರ್ತಿಯಾಗಿದ್ದಾರೆ. ದೇವರು ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ನೀಡಲಿ ಎಂದು ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ.ಶ್ರೀನಿವಾಸ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ದ್ರೌಪದಿ ಮುರ್ಮು, ಸಿನ್ಹಾ ಇಬ್ಬರಿಗೂ ವೋಟು ಹಾಕಲ್ಲ: ರಾಷ್ಟ್ರಪತಿ ಚುನಾವಣೆ ಬಹಿಷ್ಕರಿಸಿದ ಅಕಾಲಿ ದಳ ಶಾಸಕ
Advertisement
Former Prime Minister and Congress MP Dr Manmohan Singh cast his vote for the Presidential election, today at the Parliament. pic.twitter.com/H6jl3O7hlb
— ANI (@ANI) July 18, 2022
ರಾಷ್ಟ್ರಪತಿ ಆಯ್ಕೆಯಲ್ಲಿ ಎನ್‍ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು, ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ ಸಿನ್ಹಾ ಕಣದಲ್ಲಿದ್ದಾರೆ. ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಶೇ.60ರಷ್ಟು ಮತಗಳೊಂದಿಗೆ ಗೆಲ್ಲುವುದು ಬಹುತೇಕ ಖಚಿತವಾಗಿದೆ. ದ್ರೌಪದಿ ಮುರ್ಮು ಅವರ ಅಭ್ಯರ್ಥಿಗೆ ಹಲವಾರು ಪ್ರಾದೇಶಿಕ ಪಕ್ಷಗಳು ತಮ್ಮ ಬೆಂಬಲವನ್ನು ಘೋಷಿಸಿರುವುದರಿಂದ ಒಟ್ಟು ಮತಗಳಲ್ಲಿ ಸುಮಾರು 62 ಪ್ರತಿಶತದಷ್ಟು ಮತಗಳನ್ನು ಗಳಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ- ಮತ ಚಲಾಯಿಸಿದ ಪ್ರಧಾನಿ ಮೋದಿ