ಬೆಂಗಳೂರು: ಸಿಲಿಕಾನ್ ಸಿಟಿ ಜನರು ಎಂದು ಎಂದು ಮರೆಯದ ಯೋಜನೆಗಳಿಗೆ ಮನಮೋಹನ್ ಸಿಂಗ್ (Manmohan Singh) ಚಾಲನೆ ನೀಡಿದ್ದರು. ಅಧಿಕಾರಾವಧಿಯಲ್ಲಿ ಬೆಂಗಳೂರಿಗೆ (Bengaluru) ಅಪಾರ ಕೊಡುಗೆ ನೀಡಿದ್ದರು.
2008ರಲ್ಲಿ ಸಿಂಗ್ ಪ್ರಧಾನ ಮಂತ್ರಿಯಾಗಿದ್ದ ಅವಧಿಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು (Bengaluru International Airport) ಉದ್ಘಾಟಿಸಿದ್ದರು. ಏರ್‌ಪೋರ್ಟ್ ಉದ್ಘಾಟನೆಯಾದ ಮೂರು ವರ್ಷಗಳ ಬಳಿಕ ಮೊದಲ ನಮ್ಮ ಮೆಟ್ರೋ ಮಾರ್ಗ ಲೋಕಾರ್ಪಣೆ ಮಾಡಿದ್ದರು. ಇದನ್ನೂ ಓದಿ: ಭಾರತವನ್ನೇ ಬದಲಿಸಿತು ಆ ಒಂದು ಫೋನ್ ಕಾಲ್
ಅಕ್ಟೋಬರ್ 20, 2011 ರಂದು ಬೈಯಪ್ಪನಹಳ್ಳಿಯಿಂದ ಎಂಜಿ ರೋಡ್ ವರೆಗಿನ ಮೊದಲ ಮೆಟ್ರೋ (Namma Metro) ರೈಲಿಗೆ ಮನಮೋಹನ್ ಸಿಂಗ್ ಚಾಲನೆ ನೀಡಿದ್ದರು. ಇದನ್ನೂ ಓದಿ: ಪಾಕ್ ಪ್ರಧಾನಿ ಜೊತೆ ವಿಶ್ವಕಪ್ ವೀಕ್ಷಣೆ – ಇಂಡೋ -ಪಾಕ್ ಕ್ರಿಕೆಟ್‌ಗೆ ಮತ್ತೆ ಚಾಲನೆ ನೀಡಿದ್ದ ಸಿಂಗ್!
ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮಾತನಾಡಿ, ಮನಮೋಹನ್ ಸಿಂಗ್ ಅವರು ಕರ್ನಾಟಕಕ್ಕೆ ಅದರಲ್ಲೂ ಬೆಂಗಳೂರು ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದವರು. ನರ್ಮ್ ಯೋಜನೆ ಮೂಲಕ ಅನೇಕ ನಗರಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದರು. ಬೆಂಗಳೂರಿನ ಅನೇಕ ಮೇಲ್ಸೇತುವೆಗಳು ಇವರು ನೀಡಿದ ಕೊಡುಗೆಗಳು. ಮನ ಮೋಹನ್ ಸಿಂಗ್ ಅವರ ಬಗ್ಗೆ ಮಾತನಾಡಲು ಒಂದು ದಿನವೂ ಸಾಲುವುದಿಲ್ಲ. ಅವರು ದೇಶದ ಎಲ್ಲಾ ವರ್ಗದ ಜನರಿಗೆ ಮರೆಯಲಾಗದ ಕೊಡುಗೆ ಕೊಟ್ಟಿದ್ದಾರೆ. ರೈತರ ಸಾಲಮನ್ನಾ ಮಾಡಿ ಅವರ ಪರವಾಗಿ ದೃಢವಾಗಿ ನಿಂತವರು ಎಂದು ಸ್ಮರಿಸಿದರು.