-ದುಷ್ಯಂತ್ ಚೌಟಾಲಾ ಡಿಸಿಎಂ
ಚಂಡೀಗಢ: ಬಿಜೆಪಿ ನಾಯಕ ಮನೋಹರ್ ಲಾಲ್ ಖಟ್ಟರ್ ಮತ್ತು ಜನ್‍ನಾಯಕ್ ಜನತಾ ಪಾರ್ಟಿಯ ಮುಖ್ಯಸ್ಥ ದುಷ್ಯಂತ್ ಚೌಟಾಲಾ ಇಂದು ಸಿಎಂ ಮತ್ತು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.
ಚಂಡೀಗಢನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಖಟ್ಟರ್ ಎರಡನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಇತ್ತ ಮೈತ್ರಿ ಪಕ್ಷ ಜೆಜೆಪಿಯ ನಾಯಕ ದುಷ್ಯಂತ್ ಚೌಟಾಲಾ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಗರ್ವನರ್ ಸತ್ಯದೋವೋ ನರೈನ್ ಆರ್ಯ ಇಬ್ಬರು ನಾಯಕರಿಗೆ ಪ್ರಮಾಣ ವಚನ ಬೋಧಿಸಿದರು.
Advertisement
Manohar Lal Khattar on Sunday took oath as Haryana Chief Minister for the second term after the recently concluded polls in the state.
Read @ANI Story | https://t.co/XVtBeCAdOW pic.twitter.com/HU30O8VUVv
— ANI Digital (@ani_digital) October 27, 2019
Advertisement
ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಬಿಜೆಪಿಯ ಕಾರ್ಯನಿರತ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಜೆಜೆಪಿ ಮುಖಂಡರು ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು. ಕಾಂಗ್ರೆಸ್ ನ ಭೂಪೀಂದ್ರ ಹೂಡಾ ಹಾಗೂ ಅಕಾಲಿದಳ ನಾಯಕ ಪ್ರಕಾಶ್ ಸಿಂಗ್ ಬಾದಲ್, ಪಕ್ಷದ ಮುಖಂಡರು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Advertisement
ಚುನಾವಣೆಯಲ್ಲಿ ಹರ್ಯಾಣದ ಜನತೆ ಯಾವ ಪಕ್ಷಕ್ಕೂ ಬಹುಮತವನ್ನು ನೀಡಿರಲಿಲ್ಲ. ಹಾಗಾಗಿ ಬಿಜೆಪಿ ತನ್ನ 40 ಶಾಸಕರೊಂದಿಗೆ ಜೆಜೆಪಿಯ 10 ಮತ್ತು ಪಕ್ಷೇತರ 7 ಶಾಸಕರ ಬೆಂಬಲದೊಂದಿಗೆ ಹರ್ಯಾಣದಲ್ಲಿ ಸರ್ಕಾರ ರಚಿಸಿದೆ.
Advertisement
Chandigarh: Dushyant Chautala takes oath as the Deputy Chief Minister of Haryana, at the Raj Bhawan. #HaryanaAssemblyPolls pic.twitter.com/iXr7oyFauk
— ANI (@ANI) October 27, 2019
ಗುರುವಾರ ಪ್ರಕಟವಾದ ಹರ್ಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶವು ಅಂತಂತ್ರ ಸ್ಥಿತಿಯನ್ನು ತಂದೊಡ್ಡಿತ್ತು. ಒಟ್ಟು 90 ಸ್ಥಾನಗಳ ಪೈಕಿ ಬಿಜೆಪಿ 40, ಕಾಂಗ್ರೆಸ್ 31 ಹಾಗೂ ಜನನಾಯಕ್ ಜನತಾ ಪಕ್ಷ 10 ಸೀಟ್‍ಗಳನ್ನು ಗೆದ್ದಿವೆ. ಪಕ್ಷೇತರರು 7 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಇತರೆ ಪಕ್ಷಗಳು ಎರಡು ಸ್ಥಾನಗಳನ್ನು ಪಡೆದಿವೆ. ಬಿಜೆಪಿ ಸರ್ಕಾರ ರಚಿಸಲು ಕೇವಲ 6 ಸ್ಥಾನಗಳ ಕೊರತೆ ಉಂಟಾಗಿತ್ತು. 31 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಜೆಜೆಪಿ ಹಾಗೂ ಪಕ್ಷೇತರರ ಬೆಂಬಲದಿಂದ ಸರ್ಕಾರ ರಚಿಸಲು ಮುಂದಾಗಿತ್ತು. ಹೀಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳ ಮಧ್ಯೆ ಪೈಪೋಟಿ ಉಂಟಾಗಿತ್ತು.
Chandigarh: Manohar Lal Khattar takes oath as the Chief Minister of Haryana, at the Raj Bhawan. #HaryanaAssemblyPolls pic.twitter.com/SBqHELyaAk
— ANI (@ANI) October 27, 2019