ಪಣಜಿ: ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಮೂಗಿಗೆ ಹಾಕಿಕೊಂಡೇ ಬುಧವಾರ ರಾಜ್ಯ ಬಜೆಟ್ ಮಂಡಿಸಿದ್ದಾರೆ.
ಹಣಕಾಸು ಖಾತೆಯನ್ನು ನಿಭಾಯಿಸುತ್ತಿರುವ ಮನೋಹರ್ ಪರಿಕ್ಕರ್ ಅವರು ಇಂದು ಗೋವಾ ವಿಧಾನಸಭೆಗೆ ಮೂಗಿಗೆ ಪೈಪ್, ತಲೆಗೆ ಟೋಪಿ ಹಾಕಿಕೊಂಡು ಆಗಮಿಸಿದ್ದರು. ಬಳಿಕ ಮೆಲು ಧ್ವನಿಯಲ್ಲಿಯೇ ಬಜೆಟ್ ಮಂಡಿಸಿದರು. ಹೀಗಾಗಿ ವಿಧಾನಸಭೆಯ ಸದಸ್ಯರು ಶಾಂತವಾಗಿ ಬಜೆಟ್ ಭಾಷಣವನ್ನು ಆಲಿಸಿದರು.
Advertisement
ಪರಿಕ್ಕರ್ ಅವರು ತಮ್ಮ ಭಾಷಣದ ಮಧ್ಯದಲ್ಲಿ ಹಲವು ಬಾರಿ ಸಿಬ್ಬಂದಿಗೆ ಕೇಳಿ ನೀರು ಪಡೆದು ಬಜೆಟ್ ಮಂಡನೆಯನ್ನು ಪೂರ್ಣಗೊಳಿಸಿದರು. ಅನಾರೋಗ್ಯ ಪರಿಸ್ಥಿತಿಯಲ್ಲೂ ಬಜೆಟ್ ಮಂಡನೆ ಮೂಲಕ ಕರ್ತವ್ಯ ನಿರ್ವಹಿಸಿದ ಮನೋಹರ್ ಪರಿಕ್ಕರ್ ಅವರಿಗೆ ಪಕ್ಷಾತೀತವಾಗಿ ಅಭಿನಂದನೆ ಸಲ್ಲಿಸಿದರು.
Advertisement
Goa Chief Minister Manohar Parrikar in state assembly: Today, once again I promise that I will serve Goa with sincerity, integrity, and dedication until my last breath. There is a josh, that is too high and I'm fully in hosh. pic.twitter.com/NwaDxCQrTi
— ANI (@ANI) January 30, 2019
Advertisement
ಕಾಂಗ್ರೆಸ್ ಶಾಸಕನಿಗೆ ಟಾಂಗ್:
ಗೋವಾ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಚೋಡನ್ಕರ್, ಮೊದಲು ಹುಷಾರಾಗಿ ಬನ್ನಿ, ಆಮೇಲೆ ಜೋಷ್ ಕುರಿತಾಗಿ ಮಾತನಾಡಿ ಎಂದು ಕಳೆದ ಸೋಮವಾರ ವ್ಯಂಗ್ಯವಾಡಿದ್ದರು. ಬಜೆಟ್ ಮಂಡನೆಗೂ ಮುನ್ನ ಮಹೋಹರ್ ಪರಿಕ್ಕರ್ ಅವರು, ನಾನು ಅತ್ಯಂತ ಜೋಷ್‍ನಿಂದಲೇ ಬಜೆಟ್ ಮಂಡಿಸುತ್ತಿದ್ದೇನೆ ಎಂದು ಹೇಳುವ ಮೂಲಕ ಗಿರೀಶ್ ಚೋಡನ್ಕರ್ ಅವರಿಗೆ ತಿರುಗೇಟು ನೀಡಿದರು.
Advertisement
ನನ್ನ ಕೊನೆ ಉಸಿರು ಇರುವವರೆಗೂ ರಾಜ್ಯದ ಜನರ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು ಭಾವನಾತ್ಮಕವಾಗಿ ಹೇಳಿದರು.
Panaji: Chief Minister of Goa, Manohar Parrikar addresses the budget session in the state Assembly. pic.twitter.com/Mj7gNMCvOW
— ANI (@ANI) January 30, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv