ಬೆಂಗಳೂರು: ಸುಖಾ ಸುಮ್ಮನೆ ಸದನದ ಸಮಯ ನಾನು ಹಾಳು ಮಾಡುವುದಿಲ್ಲ. ಜನರ ಪರವಾದ ಚರ್ಚೆ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಸುಖಾಸುಮ್ಮನೆ ಸದನ(Session) ಸಮಯವನ್ನು ಹಾಳು ಮಾಡಲಾರೆ. ಇವತ್ತಿನ ಜೆಡಿಎಲ್‌ಪಿ ಸಭೆಯಲ್ಲಿಯೂ ಈ ವಿಷಯದ ಸೇರಿ ಹಲವಾರು ವಿಚಾರವಾಗಿ ಚರ್ಚೆ ಮಾಡಲಾಗಿದೆ. ರಾಜ್ಯದಲ್ಲಿ ಇತ್ತಿಚೆಗೆ ಬೆಂಗಳೂರು(Bengaluru) ನಗರ ಸೇರಿ 22 ಜಿಲ್ಲೆಯಲ್ಲಿ ಅತಿವೃಷ್ಠಿ ಉಂಟಾಗಿದೆ. ಇದರಿಂದಾಗಿ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇದರಿಂದ ದೊಡ್ಡ ಮಟ್ಟದ ನಷ್ಟವಾಗಿದೆ. ಬೆಳೆ ಹಾನಿ, ಮನೆ ಕುಸಿತವೂ ಆಗಿದೆ. ಈ ಬಗ್ಗೆ ಸದನದಲ್ಲಿ ವಿವರವಾಗಿ ಚರ್ಚೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದರು.
Advertisement
Advertisement
ಸರ್ಕಾರದ ಪರ್ಸೆಂಟೇಜ್ ಬಗ್ಗೆ ರಾಜ್ಯದ ಉದ್ದಗಲಕ್ಕೂ ಬೀದಿಲಿ ಚರ್ಚೆ ನಡೆಯುತ್ತಿದೆ. ಅಧಿಕೃತ ವಿರೋಧ ಪಕ್ಷ, ಆಳುವ ಪಕ್ಷಗಳ ನಡುವೆ ರಾಜ್ಯದಲ್ಲಿ ನಡೆಯುತ್ತಿರುವ ಲೂಟಿ ಬಗ್ಗೆ ಬರೀ ಮಾತಿನಲ್ಲಿ ಪೈಪೋಟಿ ನಡೆಯುತ್ತಿದೆ. ನಿಖರವಾಗಿ ದಾಖಲೆಗಳು ಇದ್ದರೆ ಚರ್ಚೆ ಮಾಡಿ ಎಂದು ನಾನು ನಮ್ಮ ಶಾಸಕರಿಗೆ(MLA) ತಿಳಿಸಿದ್ದೇನೆ. ನಾನು ಕೂಡ ದಾಖಲೆ ಇಟ್ಟುಕೊಂಡೇ ಮಾತನಾಡುತ್ತೇನೆ. ಸುಖಾಸುಮ್ಮನೆ ಸದನದಲ್ಲಿ ಸಂತೆ ಭಾಷಣ ಮಾಡಿದರೆ ಪ್ರಯೋಜನವಿಲ್ಲ. ಸದನದ ಅಮೂಲ್ಯ ಸಮಯವನ್ನು ಸದುಪಯೋಗ ಮಾಡಿಕೊಳ್ಳುವಂತೆ ಶಾಸಕರಿಗೆ ಸಲಹೆ ನೀಡಿದ್ದೇನೆ ಎಂದರು. ಇದನ್ನೂ ಓದಿ: ರಾಜಕಾಲುವೆ ಒತ್ತುವರಿ ತೆರವಿಗೆ ನೋಟಿಸ್ ಕೊಡುವ ಅಗತ್ಯವಿಲ್ಲ: ಅಶೋಕ್
Advertisement
ನಾಳೆಯಿಂದ 9 ದಿನಗಳ ಕಾಲ ಅಧಿಕೃತ ವಿರೋಧ ಪಕ್ಷ ಚರ್ಚೆಗೆ ಯಾವ ರೀತಿ ಆದ್ಯತೆ ಕೊಡಲಿದೆ ಎಂಬುದನ್ನು ನೋಡುತ್ತೇವೆ. ಉತ್ತಮ ರೀತಿಯ ಕಲಾಪಕ್ಕೆ ಅವಕಾಶ ಯಾವ ರೀತಿ ಇರುತ್ತದೆ ಎಂದು ಗಮನಿಸುತ್ತೇವೆ. ಸುಮ್ಮನೆ ವಿಚಾರ ಇಲ್ಲದೆ, ದಾಖಲೆ ಇಲ್ಲದೇ ಮಾತಾಡುವುದರಿಂದ ಸದನದ ಕಲಾಪಕ್ಕೆ ಧಕ್ಕೆ ಆಗಲಿದೆ ಎಂದರು.
Advertisement
ಇತ್ತೀಚೆಗೆ ನಾನು ಸದನದ ಕಲಾಪದಲ್ಲಿ ದೊಡ್ಡ ಮಟ್ಟದ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ. ಯಾವುದಾದರೂ ಮುಖ್ಯ ವಿಚಾರ ಇದ್ದಾಗ ಭಾಗಿಯಾಗಿದ್ದೇನೆ. ನಾನು ಭಾಗಿಯಾದಾಗ ದಾಖಲೆ ಸಮೇತ ಮಾತನಾಡಿದ್ದೇನೆ. ಒಂದಿಷ್ಟು ಜನ ಹೇಳ್ತಾ ಇದ್ದಾರೆ, ಸದನದಲ್ಲಿ ಕುಮಾರಸ್ವಾಮಿ ಏನು ಮಾತಾಡಿ ಬಿಟ್ಟಾರು ಅಂತ. ಯಾರೋ ಸುಮ್ಮನೆ ನನ್ನನ್ನು ಸುಖಾಸುಮ್ಮನೆ ಅವರತ್ತಿರ ನಾನು ಪಾಠ ಹೇಳಿಸಿಕೊಳ್ಳಬೇಕಿದೆ. ಒಂದಿಷ್ಟು ದಾಖಲೆಗಳನ್ನು ನಾನು ಸ್ಯಾಂಪಲ್ ಆಗಿ ಬಹಿರಂಗ ಮಾಡುತ್ತೇನೆ. ಇದನ್ನು ಒಂದು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇನೆ. ಸಾರ್ವಜನಿಕ ಆಸ್ತಿಯನ್ನು ಹಣಕ್ಕೋಸ್ಕರ ಮಾರಾಟಕ್ಕೆ ಇಡ್ತಾ ಇದ್ದಾರೆ. ಇದಕ್ಕೆ ತಡೆ ಹಾಕಬೇಕಿದೆ ಎಂದು ಅವರು ಮಾಹಿತಿ ನೀಡಿದರು. ಇದನ್ನೂ ಓದಿ: ರಾಜಕಾಲುವೆ ಅತಿಕ್ರಮ ತೆರವು ಕಾರ್ಯಾಚರಣೆ – ಭೇದಭಾವದ ಪ್ರಶ್ನೆಯೇ ಇಲ್ಲವೆಂದ ಸಿಎಂ