ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಐಎಂಎ ಜ್ಯುವೆಲ್ಸ್ ಮಾಲೀಕ ಮನ್ಸೂರ್ ಖಾನ್‍ನನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದಾರೆ.
ಮನ್ಸೂರ್ ಖಾನ್‍ನನ್ನು ಇಡಿ ಅಧಿಕಾರಿಗಳು ಶುಕ್ರವಾರ ರಾತ್ರಿ ದೆಹಲಿ ಕೋರ್ಟ್ ಎದುರು ಹಾಜರು ಪಡಿಸಲಾಗಿತ್ತು. ಇಂದು ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ.
Advertisement
Advertisement
ಸದ್ಯಕ್ಕೆ ಬಳ್ಳಾರಿಯ ಕಾವೇರಿ ಜಂಕ್ಷನ್ ಬಳಿ ಕಾರಿನಲ್ಲಿ ಖಾನ್‍ನನ್ನು ಇಡಿ ಅಧಿಕಾರಿಗಳು ಕರೆದುಕೊಂಡು ಬರುತ್ತಿದ್ದಾರೆ. ಬೆಳಗ್ಗೆ 11 ಗಂಟೆಗೆ ಶಾಂತಿನಗರದ ಇಡಿ ವಿಶೇಷ ಕೋರ್ಟ್ ಎದುರು ಅಧಿಕಾರಿಗಳು ಮನ್ಸೂರ್ ಖಾನ್‍ನನ್ನು ಹಾಜರು ಪಡಿಸಲಿದ್ದಾರೆ. ಈ ವೇಳೆ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಸಲ್ಲಿಸುವ ಸಾಧ್ಯತೆ ಇದೆ. ಪೊಲೀಸರು ಜೊತೆಗೆ ಎಸ್‍ಐಟಿ ಇಲಾಖೆಯವರು ಕೂಡ ತಮ್ಮ ವಶಕ್ಕೆ ನೀಡುವಂತೆ ಕೇಳುವ ಸಾಧ್ಯತೆ ಇದೆ.
Advertisement
Advertisement
ಮನ್ಸೂರ್ ಖಾನ್ ಸಾವಿರಾರು ರೂಪಾಯಿ ಹಣವನ್ನು ತೆಗೆದುಕೊಂಡು ಸುಮಾರು ಒಂದು ತಿಂಗಳ ಹಿಂದೆ ಪರಾರಿಯಾಗಿದ್ದನು. ಈಗಾಗಲೇ ಮನ್ಸೂರ್ ಖಾನ್‍ನ ಸುಮಾರು 200 ಕೋಟಿ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ. ಈತ ಬರುವ ಸುದ್ದಿ ಕೇಳಿ ಇಡಿ ಕೋರ್ಟ್ ಬಳಿ ಸಾವಿರಾರು ಜನರು ಬರುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಡಿ ಕೋರ್ಟ್ ಬಳಿ ಪೊಲೀಸರನ್ನು ನಿಯೋಜಿಸಲಾಗುತ್ತಿದೆ.
ವಂಚನೆ ಹೇಗೆ?
ಐಎಂಎ ಜ್ಯುವೆಲ್ಸ್ ಚಿನ್ನ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು. ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ 2-3 ತಿಂಗಳಿನಿಂದ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದರು.