ರಾಯಚೂರು: ಮಂತ್ರಾಲಯದ (Mantralaya) ಶ್ರೀ ರಾಘವೇಂದ್ರ ಸ್ವಾಮಿ ಮಠದ (Raghavendra Mutt) ಡಿಸೆಂಬರ್ ಜನವರಿ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಕಳೆದ 22 ದಿನದಲ್ಲಿ 3,53,54,465 ರೂ. ಕಾಣಿಕೆ ಸಂಗ್ರಹವಾಗಿದೆ.
ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಈ 22 ದಿನಗಳಲ್ಲಿ ಮಠಕ್ಕೆ ಕೋಟ್ಯಂತರ ರೂಪಾಯಿ ಕಾಣಿಕೆ ಹರಿದು ಬಂದಿದ್ದು, ಸಂಗ್ರಹವಾದ ಕಾಣಿಕೆಯಲ್ಲಿ 3,42,70,305 ರೂ. ಕರೆನ್ಸಿ ನೋಟುಗಳು. 10,84,160 ರೂ. ನಾಣ್ಯಗಳು ಸಂಗ್ರಹವಾಗಿವೆ. 32 ಗ್ರಾಂ ಚಿನ್ನ, 1278 ಗ್ರಾಂ ಬೆಳ್ಳಿಯನ್ನ ಕಾಣಿಕೆ ರೂಪದಲ್ಲಿ ಭಕ್ತರು ನೀಡಿದ್ದಾರೆ. ಇದನ್ನೂ ಓದಿ: ವೀರಶೈವ ಲಿಂಗಾಯತ ಮಹಾಸಭಾ ನೂತನ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಅವಿರೋಧ ಆಯ್ಕೆ
ಮಂತ್ರಾಲಯ ರಾಯರ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರ ಸೇವಕರು ಭಾಗವಹಿಸಿದ್ದರು. ಇದನ್ನೂ ಓದಿ: ಲಕ್ಕುಂಡಿ ಉತ್ಕನನ – ಶಿವಲಿಂಗದ ಪಾಣಿಪೀಠವನ್ನು ಸಂಪೂರ್ಣ ಹೊರತೆಗೆದ ಪುರಾತತ್ವ ಇಲಾಖೆ


