ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯದ (Mantralaya) ಶ್ರೀ ರಾಘವೇಂದ್ರ ಸ್ವಾಮಿ (Shri Raghavendra Swamy Mutt) ಮಠದ ಹುಂಡಿ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, 21 ದಿನದಲ್ಲಿ 3.08 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.
ಜನವರಿಯಿಂದ ಫೆಬ್ರವರಿ ತಿಂಗಳು ಸೇರಿ ಒಟ್ಟು 21 ದಿನದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, 21 ದಿನದಲ್ಲಿ 3,08, 37,571 ರೂ. ಕಾಣಿಕೆ ಸಂಗ್ರಹವಾಗಿದೆ.ಇದನ್ನೂ ಓದಿ: ತಿರುಪತಿ ಲಡ್ಡು ಕಲಬೆರಕೆ ವಿವಾದ – ಸಿಬಿಐ ಬಳಿಕ ಇ.ಡಿ ಎಂಟ್ರಿ
ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಎರಡು ತಿಂಗಳಿನ ಈ 21 ದಿನಗಳಲ್ಲಿ ಮಠಕ್ಕೆ ಕೋಟ್ಯಂತರ ರೂಪಾಯಿ ಕಾಣಿಕೆ ಹರಿದು ಬಂದಿದ್ದು, ಸಂಗ್ರಹವಾದ ಕಾಣಿಕೆಯಲ್ಲಿ 2,98,13,571 ರೂ. ಕರೆನ್ಸಿ ನೋಟುಗಳು ಹಾಗೂ 10,24,000 ರೂ. ನಾಣ್ಯಗಳು ಸಂಗ್ರಹವಾಗಿವೆ. 13 ಗ್ರಾಂ ಚಿನ್ನ, 1,018 ಗ್ರಾಂ ಬೆಳ್ಳಿಯನ್ನ ಕಾಣಿಕೆ ರೂಪದಲ್ಲಿ ಭಕ್ತರು ನೀಡಿದ್ದಾರೆ.
ಮಂತ್ರಾಲಯ ರಾಯರ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರ ಸೇವಕರು ಭಾಗವಹಿಸಿದ್ದರು.ಇದನ್ನೂ ಓದಿ: ಸಿಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆ ಚುರುಕು – ಪೊಲೀಸರಿಂದ ಐಟಿ ಅಧಿಕಾರಿಗಳ ವಿಚಾರಣೆ

