ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ (Raghavendra Swamy Temple Mantralayam) ಕಳೆದ 27 ದಿನಗಳಲ್ಲಿ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ಕಾಣಿಕೆ ಹುಂಡಿ (Hundi) ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು ಒಟ್ಟು 2,89,96,295 ರೂ. ಕಾಣಿಕೆ ಸಂಗ್ರಹವಾಗಿದೆ.
ಒಟ್ಟು ಸಂಗ್ರಹವಾದ ಕಾಣಿಕೆಯಲ್ಲಿ 2,84,12,635 ರೂ. ಕರೆನ್ಸಿ ನೋಟುಗಳು ಹಾಗೂ 5,83,660 ರೂ ನಾಣ್ಯಗಳ ಸಂಗ್ರಹವಾಗಿದೆ. 57 ಗ್ರಾಂ ಚಿನ್ನ ಹಾಗೂ 910 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ. ಇದನ್ನೂ ಓದಿ: ಸ್ಕೂಟರ್‌ನಲ್ಲಿ 7 ಮಕ್ಕಳನ್ನು ಒಟ್ಟಿಗೆ ಕರೆದೊಯ್ದ ವ್ಯಕ್ತಿ ವಿರುದ್ಧ ಎಫ್‍ಐಆರ್
ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದೆ ಎಂದು ಗುರು ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ಶ್ರೀನಿವಾಸ ರಾವ್ ಮಾಹಿತಿ ನೀಡಿದ್ದಾರೆ. ಮುಜರಾಯಿ ಇಲಾಖೆ ಅಧಿಕಾರಿಗಳು, ಗುರುಪಾದ ಕರಸೇವಕರು ಹಾಗೂ ನೂರಾರು ಜನ ಸಿಬ್ಬಂದಿ ಹಾಗೂ ಭಕ್ತರು ಕಾಣಿಕೆ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.