ಬೆಂಗಳೂರು: ಬರೋಬ್ಬರಿ 39 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ಬಿಬಿಎಂಪಿ ಮಲ್ಲೇಶ್ವರದಲ್ಲಿರುವ ಮಂತ್ರಿ ಮಾಲ್‍ಗೆ ಬೀಗ ಹಾಕಿದೆ. ತೆರಿಗೆ ಕಟ್ಟುವವರೆಗೆ ಮಾಲ್ ಓಪನ್ ಮಾಡಲು ಬಿಡುವುದಿಲ್ಲ ಎಂದು ಬಿಬಿಎಂಪಿ ಖಡಕ್ ಎಚ್ಚರಿಕೆ ನೀಡಿದೆ.
ಕಳೆದ ಮೂರು ವರ್ಷಗಳಿಂದ ಮಂತ್ರಿ ಮಾಲ್ ತೆರಿಗೆ ಕಟ್ಟಿಲ್ಲ, ಬಡ್ಡಿ ಸೇರಿ ಒಟ್ಟು 39 ಕೋಟಿ ರೂ. ತೆರಿಗೆ ಬಾಕಿ ಉಳಿದಿದೆ. ಇಂದು ಪಾಲಿಕೆ ಅಧಿಕಾರಿಗಳು ವಸೂಲಿಗೆ ತೆರಳಿದ್ದರು. ಈ ವೇಳೆ ಸಹ ತೆರಿಗೆ ಕಟ್ಟಿಲ್ಲ. ಹೀಗಾಗಿ ಬೀಗ ಜಡಿಯಲಾಗಿದೆ ಎಂದು ಮಲ್ಲೇಶ್ವರ ಪಶ್ವಿಮ ಡಿಸಿ ಪ್ರಸನ್ನ ಕುಮಾರ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.
Advertisement
Advertisement
ಎಷ್ಟೇ ನೋಟಿಸ್ ನೀಡಿದರೂ ಮಂತ್ರಿ ಮಾಲ್ ಮಾತ್ರ ಬುದ್ಧಿ ಕಲಿತಿಲ್ಲ. ಪ್ರತಿಷ್ಟಿತ ಮಂತ್ರಿ ಮಾಲ್ 39 ಕೋಟಿ ರೂಪಾಯಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿದೆ. ತೆರಿಗೆ ಬಾಕಿ ಪಾವತಿಸುವಂತೆ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತರು ನೋಟಿಸ್ ನೀಡಿದ್ದರು. 2017ರಿಂದ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ತೆರಿಗೆ ಬಾಕಿ ಹಿನ್ನೆಲೆ ಮಂತ್ರಿ ಮಾಲ್ ಗೆ ಬೀಗ ಹಾಕಲು ಬಿಬಿಎಂಪಿ ಮುಂದಾಗಿದೆ. ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ ಹಾಗೂ ಬಿಬಿಎಂಪಿ ಅಧಿಕಾರಿಗಳಿಂದ ಮಂತ್ರಿ ಮಾಲ್ ಗೆ ಬೀಗ ಹಾಕಲಾಗಿತ್ತು. ಬಳಿಕ 5 ಕೋಟಿ ರೂ. ಪಾವತಿ, ಉಳಿದ ಹಣವನ್ನು ಅಕ್ಟೋಬರ್ ಅಂತ್ಯದ ವೇಳೆ ಕಟ್ಟುವುದಾಗಿ ಭರವಸೆ ನೀಡಿದ್ದರಿಂದ ಬೀಗ ತೆರವುಗೊಳಿಸಲಾಗಿದೆ. ಇದನ್ನೂ ಓದಿ: ಮೆಟ್ರೋ ಕಾಮಗಾರಿ – 30 ಅಡಿ ಮಣ್ಣು ಕುಸಿತ, ತಪ್ಪಿತು ಭಾರೀ ಅನಾಹುತ
Advertisement
Advertisement
ಆಸ್ತಿ ತೆರಿಗೆ ಕಟ್ಟಲು ಸಾಕಷ್ಟು ಕಾಲಾವಕಾಶ ನೀಡಲಾಗಿತ್ತು. ಆದರೂ ಮಂತ್ರಿ ಮಾಲ್ ನಿರ್ಲಕ್ಷ್ಯ ವಹಿಸಿದೆ. ಆಸ್ತಿ ತೆರಿಗೆ ಕಟ್ಟುವಲ್ಲಿ ಮಂತ್ರಿ ಮಾಲ್ ಹಿಂದೇಟು ಹಾಕುತ್ತಿದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಆಸ್ತಿ ತೆರಿಗೆ ವಂಚಕರ ಸಂಖ್ಯೆ ಹೆಚ್ಚಾಗಿದ್ದು, ಬಿಬಿಎಂಪಿಗೆ ಮಂತ್ರಿ ಮಾಲ್ ದೊಡ್ಡ ತಲೆನೋವಾಗಿದೆ. ಇದನ್ನೂ ಓದಿ:ರಾತ್ರಿ ರಾಜಕಾರಣ ಮಾಡುವ ಸಂಸ್ಕೃತಿ ಬಿಜೆಪಿಯದ್ದಲ್ಲ ಕಾಂಗ್ರೆಸ್ಸಿನದ್ದು: ಸಂಜಯ್ ಪಾಟೀಲ್
ಅಭಿಷೇಕ್ ಡೆವಲಪರ್ಸ್ ಹೆಸರಿನಲ್ಲಿ ಮಂತ್ರಿ ಮಾಲ್ ಬಿಬಿಎಂಪಿಗೆ ತೆರಿಗೆ ಪಾವತಿ ಮಾಡುತ್ತಿದೆ. 2017ರಿಂದ ಇದೂವರೆಗೂ ಆಸ್ತಿ ತೆರಿಗೆ ಕಟ್ಟಿಲ್ಲ. ಮಂತ್ರಿ ಮಾಲ್ ಗೆ ನೋಟಿಸ್ ಕೊಟ್ಟು ಬಿಬಿಎಂಪಿ ಸುಸ್ತಾಗಿದೆ. ತೆರಿಗೆ ಕಟ್ಟದಿದ್ದರೆ ಆಸ್ತಿ ಮುಟ್ಟುಗೋಲು ಹಾಕುವ ಎಚ್ಚರಿಕೆಯನ್ನು ಸಹ ನೀಡಲಾಗಿದೆ. ಎಷ್ಟೇ ಹೇಳಿದರೂ ಮಂತ್ರಿ ಮಾಲ್ ನ ಆಡಳಿತಾಧಿಕಾರಿ ಮಾತ್ರ ಕೇಳುತ್ತಿಲ್ಲ. ಬಿಬಿಎಂಪಿ ಪಶ್ಚಿಮ ವಲಯದಲ್ಲಿ ಅತೀ ದೊಡ್ಡ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಪಟ್ಟಿಯಲ್ಲಿ ಮಂತ್ರಿ ಮಾಲ್ ಮೊದಲ ಸ್ಥಾನದಲ್ಲಿದೆ.
ಈ ಕುರಿತು ಮಾಹಿತಿ ನೀಡಿರುವ ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಶಿವಸ್ವಾಮಿ, ಕಳೆದ 3 ವರ್ಷದಿಂದ ಬಡ್ಡಿ ಸೇರಿ ಒಟ್ಟು 39 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿದ್ದರು. ಈ ಪೈಕಿ ಡಿಡಿ ಮೂಲಕ ಇಂದು 5 ಕೋಟಿ ರೂ.ಗಳಷ್ಟು ಪಾವತಿ ಮಾಡಿದ್ದಾರೆ. ಇನ್ನೂ 34 ಕೋಟಿ ರೂ.ಗಳನ್ನು ಅಕ್ಟೋಬರ್ ಕೊನೆಯಲ್ಲಿ ನೀಡುವುದಾಗಿ ಹೇಳಿದ್ದಾರೆ. ಕೊರೊನಾ ನೆಪ ಹೇಳಿದ್ದರು. ಆದರೆ ಸೆಪ್ಟೆಂಬರ್ ಒಳಗಡೆ ಪೂರ್ತಿ ತೆರಿಗೆ ಕಟ್ಟುವಂತೆ ನೋಟಿಸ್ ನೀಡಲಾಗಿತ್ತು. ಆದರೆ ಆರ್ಥಿಕ ಸಂಕಷ್ಟದ ಹಿನ್ನೆಲೆ ತೆರಿಗೆ ಪಾವತಿಸಲು ಆಗುತ್ತಿಲ್ಲ ಎಂದು ಹೇಳಿದ್ದರು ಎಂದು ತಿಳಿಸಿದ್ದಾರೆ.