– ಒಲಿಂಪಿಕ್ಸ್‌ನಲ್ಲಿ 2 ಪದಕ ಗೆದ್ದು ಪ್ರಶಸ್ತಿಗಾಗಿ ಭಿಕ್ಷೆ ಬೇಡಿದ್ರೆ ಏನು ಪ್ರಯೋಜನ? ಎಂದು ಬೇಸರ
ನವದೆಹಲಿ: ಮಹಿಳೆಯರ 10m ಏರ್ ಪಿಸ್ತೂಲ್ ಸ್ಪರ್ಧೆ ಮತ್ತು 10m ಪಿಸ್ತೂಲ್ ಡಬಲ್ಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಪ್ಯಾರಿಸ್ ಒಲಂಪಿಕ್ಸ್‌ನಲ್ಲಿ (Paris Olympics) ಐತಿಹಾಸಿಕ ಸಾಧನೆ ಮಾಡಿದ್ದ ಮನು ಭಾಕರ್ (Manu Bhaker) ಅವರನ್ನು ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ ಎಂದು ಮೂಲಗಳು ಹೇಳಿವೆ.
Advertisement
ಭಾರತೀಯ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾ-ಅಥ್ಲೀಟ್ ಪ್ರವೀಣ್ ಕುಮಾರ್ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದು (Khel Ratna Nominations) ಮನು ಭಾಕರ್ ಅವರು ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸದ ಹಿನ್ನೆಲೆ ಅವರನ್ನು ಪರಿಗಣಿಸಿಲ್ಲ ಎಂದು ಕ್ರೀಡಾ ಇಲಾಖೆ ಹೇಳಿದೆ. ಇದನ್ನೂ ಓದಿ: ಹಣಕಾಸಿನ ವಂಚನೆ ತಡೆಗೆ ಆರ್‌ಬಿಐ ಅಭಿವೃದ್ಧಿಪಡಿಸಲಿದೆ AI ತಂತ್ರಜ್ಞಾನ! ಇದು ಹೇಗೆ ಕಾರ್ಯನಿರ್ವಹಿಸುತ್ತದೆ?
Advertisement
Advertisement
ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ವಿ.ರಾಮಸುಬ್ರಮಮ್ ನೇತೃತ್ವದ 12 ಸದಸ್ಯರ ಸಮಿತಿಯನ್ನು ರಚಿಸಲಾಗಿತ್ತು. ರಾಷ್ಟ್ರೀಯ ಕ್ರೀಡಾ ದಿನಾಚರಣೆಗೆ ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಹೆಸರು ಶಿಫಾರಸ್ಸು ಮಾಡಲು ಸೂಚಿಸಲಾಗಿತ್ತು.
Advertisement
ಸಮಿತಿಯ ನಿರ್ಧಾರಕ್ಕೆ ಮನು ಭಾಕರ್ ತಂದೆ ರಾಮಕೃಷ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳನ್ನು ಗೆದ್ದು ಪ್ರಶಸ್ತಿಗಾಗಿ ಭಿಕ್ಷೆ ಬೇಡಿದರೆ ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ. ಪ್ರಶಸ್ತಿಗಾಗಿ ನಾನು ಅರ್ಜಿ ಸಲ್ಲಿಸಿದ್ದೇನೆ ಸಮಿತಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು. ಇದನ್ನೂ ಓದಿ: Pune | ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್ – ಇಬ್ಬರು ಮಕ್ಕಳು ಸೇರಿ ಮೂವರ ದುರ್ಮರಣ
ಕ್ರಿಕೆಟಿಗರು ಅರ್ಜಿ ಸಲ್ಲಿಸದಿದ್ದರೂ ಮೊಹಮ್ಮದ್ ಶಮಿ ಅವರಿಗೆ ಈ ವರ್ಷದ ಆರಂಭದಲ್ಲಿ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆದರೆ ಒಂದೇ ಒಲಂಪಿಕ್ಸ್ ನಲ್ಲಿ ಎರಡು ಕಂಚು ಗೆದ್ದರೂ ನಮ್ಮನ್ನು ಪರಿಗಣಿಸಿಲ್ಲ. ಪ್ರಶಸ್ತಿಯನ್ನು ಒಬ್ಬ ಸರ್ಕಾರಿ ಅಧಿಕಾರಿ ನಿರ್ಧರಿಸುತ್ತಿದ್ದಾರೆ, ಮತ್ತು ಸಮಿತಿಯ ಸದಸ್ಯರು ತಮ್ಮ ಅಭಿಪ್ರಾಯವನ್ನು ನೀಡದೆ ಮೌನವಾಗಿದ್ದಾರೆ ನನಗೆ ಅರ್ಥವಾಗುತ್ತಿಲ್ಲ, ನೀವು ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುತ್ತಿರುವ ರೀತಿ ಇದೇನಾ? ಎಂದು ಕೇಳಿದ್ದಾರೆ. ಇದನ್ನೂ ಓದಿ: Uttar Pradesh | ಖಾಲಿಸ್ತಾನ್ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರು ಎನ್‌ಕೌಂಟರ್