ರಾಜ್ಯದ ಹಲವೆಡೆ ಮುಂದಿನ ಮೂರು ಗಂಟೆಗಳ ಕಾಲ ಭಾರೀ ಮಳೆಯ ಎಚ್ಚರಿಕೆ

Public TV
1 Min Read
rain weather

ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವೆಡೆ ಭಾನುವಾರ ಉತ್ತಮ ಮಳೆಯಾಗಿದ್ದು, ಮುಂದಿನ ಮೂರು ಗಂಟೆಗಳ ಕಾಲ ಮಳೆಯ (Rain) ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಬಿಜಾಪುರ, ದಕ್ಷಿಣ ಕನ್ನಡ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಉಡುಪಿ, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ದಾಖಲೆಯ ಮಳೆಯಬ್ಬರ- ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆ?

ಮುಂದಿನ 3 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಿಂಚು, ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದ್ದು, ಗಾಳಿಯ ವೇಗ 30 ರಿಂದ 40 ಕಿ.ಮೀ ಇರುವ ಸಾಧ್ಯತೆಯಿದೆ. ಇದನ್ನೂ ಓದಿ: ಸೋಮವಾರದಿಂದ ಅಮುಲ್‌ ಹಾಲಿನ ದರದಲ್ಲಿ 2 ರೂ. ಹೆಚ್ಚಳ

Share This Article