DistrictsKarnatakaKodaguLatestMain Post

ಕರ್ನಾಟಕ ಮಹಿಳಾ ಸೀನಿಯರ್ ಹಾಕಿ ತಂಡಕ್ಕೆ ಕೊಡಗಿನ ಮರದಾಳು ಯಶಿಕ ಆಯ್ಕೆ

ಮಡಿಕೇರಿ: ಕರ್ನಾಟಕ ಮಹಿಳಾ ಸೀನಿಯರ್ ಹಾಕಿ ತಂಡಕ್ಕೆ ಕೊಡಗಿನ ಮರದಾಳು ಯಶಿಕ ಆಯ್ಕೆಯಾಗಿದ್ದಾರೆ.

ಭೂಪಾಲ್‍ನಲ್ಲಿ ಮೇ 6 ರಿಂದ ಆರಂಭಗೊಳ್ಳುವ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡದಲ್ಲಿ ಯಶಿಕ ಕಾಣಿಸಿಕೊಳ್ಳಲಿದ್ದಾರೆ. 8ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಗಲೇ ಯಶಿಕ ಹಾಕಿಯಲ್ಲಿ ಮೊದಲ ಪಂದ್ಯವನ್ನು ಜಾರ್ಖಾಂಡ್‍ನ ಕರಾಚಿಯಲ್ಲಿ ಆಡಿದರು. ನಂತರದ ದಿನಗಳಲ್ಲಿ ದೆಹಲಿ, ಪಂಜಾಬ್, ಒರಿಸ್ಸಾ, ತಮಿಳುನಾಡು, ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ 20ಕ್ಕೂ ಹೆಚ್ಚು ಬಾರಿ ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸಿದ್ದಾರೆ. ಇಲ್ಲಿಯವರೆಗೆ ಸುಮಾರು 63ಕ್ಕಿಂತ ಅಧಿಕ ಪದಕಗಳನ್ನು ಗೆದ್ದಿದ್ದಾರೆ. ನಾಯಕಿಯಾಗಿಯೂ ಒಂದು ವರ್ಷ ಕಾಲ ಕರ್ನಾಟಕ ತಂಡವನ್ನು ಮುನ್ನಡೆಸಿದ್ದಾರೆ. ಇದನ್ನೂ ಓದಿ: ಐಪಿಎಲ್‍ನಲ್ಲಿ ವೇಗಿಗಳ ಮಿಂಚಿನ ಎಸೆತಗಳ ದಾಖಲೆ

ಚೇರಳ ಗ್ರಾಮ (ನೆಲ್ಲಿಹಡ್ಲು) ಚೆಟ್ಟಳ್ಳಿ ನಿವಾಸಿ ಮರದಾಳು ಗೋಪಾಲ (ವಿಠಲ) ಹಾಗೂ ನಾಗರತ್ನ ಅವರ ಪುತ್ರಿ ಮರದಾಳು ಯಶಿಕ ಚೆಟ್ಟಳ್ಳಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 7ನೇ ತರಗತಿಯವರೆಗೆ ವ್ಯಾಸಂಗ ಮಾಡಿದರು. ನಂತರ ಪೊನ್ನಂಪೇಟೆ ಸಾಯಿ ಹಾಕಿ ಕೇಂದ್ರಕ್ಕೆ ಸೇರ್ಪಡೆಯಾಗಿ 8 ರಿಂದ 10ನೇ ತರಗತಿವರೆಗೆ ವಿದ್ಯಾಭ್ಯಾಸ ಪೂರೈಸಿದರು. ಮೈಸೂರಿನ ಟೆರೇಸ್ಸನ್ ಕಾಲೇಜಿನಲ್ಲಿ ಪಿಯುಸಿ ಮುಗಿಸಿ ಬಿ.ಎ ವಿದ್ಯಾಭ್ಯಾಸದ ಜೊತೆಗೆ ಹಾಕಿ ಪಂದ್ಯಾವಳಿಯಲ್ಲಿ ಯಶಿಕ ರಾಜ್ಯ ಮಟ್ಟದ ಕ್ರೀಡಾಪಟುವಾಗಿ ಮಿಂಚುಹರಿಸುತ್ತಿದ್ದಾರೆ.

2020ರಲ್ಲಿ ಚೆನ್ನೈನಲ್ಲಿ ನಡೆದ ಸೌತ್‍ಜೋನ್ ಕ್ರೀಡಾಕೂಟ, ಪೊನ್ನಂಪೇಟೆಯಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಸೌತ್ ಜೋನ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಶಸ್ತಿ ಮುಡುಗೇರಿಸಿಕೊಂಡಿದ್ದರು. ರಾಜಸ್ಥಾನದಲ್ಲಿ ನಡೆದ ಆಲ್ ಇಂಡಿಯಾ ಕ್ರೀಡಾಕೂಟದಲ್ಲಿ ಭಾಗವಹಿಸಿರುವ ಯಶಿಕ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಮೈಸೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ್ದು, ಈ ತಂಡ ಬೆಳ್ಳಿ ಪದಕ ಪಡೆದುಕೊಂಡಿದೆ. ಈ ಪಂದ್ಯಾವಳಿಯಲ್ಲಿ ಇವರು ದಾಖಲೆಯ 8 ಗೋಲುಗಳನ್ನು ಬಾರಿಸಿ ಯಶಸ್ವಿ ಹಾಕಿಪಟು ಎನಿಸಿಕೊಂಡಿದ್ದಾರೆ. ಫಾರವರ್ಡ್ ಆಟಗಾರ್ತಿ ಮತ್ತು ಮುಖ್ಯ ಸ್ಟೈಕರ್‌ ಆಗಿ ಆಡಿ ಉತ್ತಮ ಪ್ರದರ್ಶನ ತೋರಿರುವ ಯಶಿಕ ಒಟ್ಟು ಈವರೆಗೆ 45ಕ್ಕೂ ಹೆಚ್ಚು ಗೋಲುಗಳನ್ನು ದಾಖಲಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಆಡಲು ಅವಕಾಶದ ನಿರೀಕ್ಷೆಯಲ್ಲಿದ್ದಾರೆ. ಇದನ್ನೂ ಓದಿ: ವಾರ್ನರ್ ಬಿಂದಾಸ್ ಬ್ಯಾಟಿಂಗ್ – ಟ್ರೋಲ್ ಕ್ವೀನ್ ಆದ ಕಾವ್ಯಾ ಮಾರನ್

Leave a Reply

Your email address will not be published.

Back to top button