ಚಾಮರಾಜನಗರ: ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಮೈಸೂರು ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಶನಿವಾರ ನಸುಕಿನ ಜಾವ ಮೂರು ಗಂಟೆ ಸುಮಾರಿಗೆ ಪೊಲೀಸರು ಆರೋಪಿಗಳನ್ನು ಜಡ್ಜ್ ಮನೆಗೆ ಕರೆದುಕೊಂಡು ಹೋಗಿದ್ದರು. ಈ ಹಿಂದೆ ಪೊಲೀಸರು ಈ ಪ್ರಕರಣ ಕುರಿತು ತನಿಖೆ ಮಾಡಲು ಜಡ್ಜ್ ಬಳಿ ನಾಲ್ಕು ದಿನ ಕಾಲಾವಕಾಶ ಕೊಡುವಂತೆ ಕೇಳಿದ್ದರು. ಆದರೆ ಪೊಲೀಸರು ಒಂದು ದಿನ ಮೊದಲೇ ವಿಚಾರಣೆ ಮುಗಿದಿದೆ ಎಂದು ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಿದ್ದರು.
ನ್ಯಾಯಾಧೀಶರು ಜನವರಿ 3 ರವರೆಗೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಂತೆ ಆದೇಶವನ್ನು ಹೊರಡಿಸಿದ್ದಾರೆ. ಬಳಿಕ ಜನವರಿ 3ರಂದು ಕೊಳ್ಳೆಗಾಲ ನ್ಯಾಯಾಲಯಕ್ಕೆ ಆರೋಪಿಗಳನ್ನು ಪೊಲೀಸರು ಹಾಜರು ಪಡಿಸಲಿದ್ದಾರೆ. ಸದ್ಯಕ್ಕೆ ಆರೋಪಿಗಳಾದ ಇಮ್ಮಡಿ ಮಹದೇವ ಸ್ವಾಮಿ, ಅಂಬಿಕಾ, ಮಾದೇಶ ಮತ್ತು ವಿಷ ಬೆರಸಿದ ದೊಡ್ಡಯ್ಯ ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಬೆಳಗ್ಗೆ ಆದರೆ ಗಲಾಟೆಗಳು ನಡೆಯುವ ಸಂಭವಿಸುವ ಸಾಧ್ಯತೆ ಇದೆ ಎಂದು ಪೊಲೀಸರು ಮುಂಜಾಗೃತಾ ಕ್ರಮವಾಗಿ ರಾತ್ರೋರಾತ್ರಿ ಮೈಸೂರು ಜೈಲಿಗೆ ನಾಲ್ವರು ಆರೋಪಿಗಳನ್ನು ಶಿಫ್ಟ್ ಮಾಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv