Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊನೆಗೂ ಪ್ರಸಾದದಲ್ಲಿ ಬೆರೆಸಿದ್ದ ವಿಷ ಯಾವುದು ಅನ್ನೋದು ಪತ್ತೆಯಾಯ್ತು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೊನೆಗೂ ಪ್ರಸಾದದಲ್ಲಿ ಬೆರೆಸಿದ್ದ ವಿಷ ಯಾವುದು ಅನ್ನೋದು ಪತ್ತೆಯಾಯ್ತು!

Districts

ಕೊನೆಗೂ ಪ್ರಸಾದದಲ್ಲಿ ಬೆರೆಸಿದ್ದ ವಿಷ ಯಾವುದು ಅನ್ನೋದು ಪತ್ತೆಯಾಯ್ತು!

Public TV
Last updated: December 17, 2018 12:51 pm
Public TV
Share
2 Min Read
MYS DGP
SHARE

ಮೈಸೂರು: ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ದೇವಾಲಯದ ದುರಂತಕ್ಕೆ ಈಗಾಗಲೇ 14 ಮಂದಿ ಮೃತಪಟ್ಟಿದ್ದು, ಪ್ರಸಾದದಲ್ಲಿ ಬೆರೆಸಿದ್ದ ವಿಷ ಯಾವುದು ಎನ್ನುವುದು ವಿಧಿವಿಜ್ಞಾನ ಪ್ರಯೋಗಾಲಯ(ಎಫ್‍ಎಸ್‍ಎಲ್) ವರದಿ ಮೂಲಕ ತಿಳಿದು ಬಂದಿದೆ.

ಭಕ್ತರು ಸೇವಿಸಿದ್ದ ವಿಷ ಪ್ರಸಾದದಲ್ಲಿ ಕ್ರಿಮಿನಾಶಕವನ್ನು ಮಿಶ್ರಣ ಮಾಡಿರುವುದು ದೃಢಪಟ್ಟಿದೆ. ದುಷ್ಕರ್ಮಿಗಳು ಮೊದಲಿಗೆ ನೀರಿನಲ್ಲಿ ಕ್ರಿಮಿನಾಶಕವನ್ನು ಮಿಶ್ರಣ ಮಾಡಿಕೊಂಡು ಬಳಿಕ ಪ್ರಸಾದಕ್ಕೆ ಬೆರೆಸಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಖಚಿತವಾಗಿದೆ.

CNG Died

ಈ ಬಗ್ಗೆ ಪ್ರತಿಕ್ರಿಯಿಸಿದ ಐಜಿಪಿ ಶರತ್ ಚಂದ್ರ ಅವರು, ಪ್ರಸಾದದಲ್ಲಿ ಆರ್ಗಾನ್ ಪಾಸ್ಪಾರಸ್ ಕಾಂಪೌಂಡ್ ಮೊನೊ ಕ್ರೋಟೋ ಫೋಸ್ ಮಿಶ್ರಣ ಆಗಿದೆ ಎನ್ನುವ ವರದಿ ಬಂದಿದೆ. ಇದನ್ನು ಕೀಟನಾಶಕ್ಕೆ ಬಳಸುತ್ತಾರೆ. ಗಿಡಕ್ಕೆ ಹುಳು ಮತ್ತು ರೋಗ ಬಂದಾಗ ಈ ಕೀಟನಾಶವನ್ನು ಸಿಂಪಡಿಸಲಾಗುತ್ತದೆ. ಇದೇ ಕ್ರಿಮಿನಾಶಕವನ್ನು ಬೆರೆಸಿರುವುದು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಸದ್ಯಕ್ಕೆ ಅನುಮಾನ ಬಂದಂತಹ ವ್ಯಕ್ತಿಗಳನ್ನು ಕರೆದುಕೊಂಡು ಪ್ರಶ್ನೆ ಮಾಡಿ ವಿಚಾರಣೆ ಮಾಡುತ್ತಿದ್ದೇವೆ. ಶೀಘ್ರವಾಗಿಯೇ ತನಿಖೆ ನಡೆಯುತ್ತಿದೆ ಎಂದು ಶರತ್ ಚಂದ್ರ ಅವರು ಹೇಳಿದ್ದಾರೆ. ಈಗಾಗಲೇ ಮಾರಮ್ಮ ದೇವಾಲಯದ ವಿಷಪ್ರಸಾದಕ್ಕೆ 14 ಮಂದಿ ಮೃತಪಟ್ಟಿದ್ದು, ಮೃತಪಟ್ಟ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

CNG FUNERAL

ಕೀಟನಾಶಕ ಶಂಕೆಯಿತ್ತು:
ದೇವರ ಪ್ರಸಾದದಲ್ಲಿ ವಿಷ ಬೆರತಿರುವುದರಿಂದ ಈ ದುರಂತ ಸಂಭವಿಸಿರಬಹುದು ಎಂದು ಕೆ.ಆರ್.ಆಸ್ಪತ್ರೆಯ ವೈದ್ಯರಾದ ರಾಜೇಶ್ ಕುಮಾರ್ ಶುಕ್ರವಾರವೇ ಶಂಕೆ ವ್ಯಕ್ತಪಡಿಸಿದ್ದರು. ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ್ದ ಅವರು, ಇದೂವರೆಗೂ ಕೆಆರ್ ಆಸ್ಪತ್ರೆಯಲ್ಲಿ ಒಟ್ಟು 25 ಮಂದಿ ದಾಖಲಾಗಿದ್ದಾರೆ. ಅಸ್ವಸ್ಥರಾಗಿರುವವರೆಲ್ಲಾ ಉಸಿರಾಡಲೂ ಸಹ ಕಷ್ಟ ಪಡುತ್ತಿದ್ದಾರೆ. ಅಸ್ವಸ್ಥರ ಗುಣಲಕ್ಷಣಗಳನ್ನು ನೋಡಿದರೇ, ಆಹಾರದಲ್ಲಿ ಕೀಟನಾಶಕ ಬೆರೆತಿರುವ ಸಂಶಯ ವ್ಯಕ್ತವಾಗುತ್ತಿದೆ. ಜಮೀನುಗಳಲ್ಲಿ ಬೆಳೆಗಳಿಗೆ ಸಿಂಪಡಿಸುವ ಕೀಟನಾಶಕ ಇರಬಹುದೆಂದು ಅಂದಾಜಿಸಲಾಗಿದೆ. ಆದರೆ ಈ ಬಗ್ಗೆ ನಿಖರವಾಗಿ ಈಗ ಹೇಳಲು ಸಾಧ್ಯವಾಗುವುದಿಲ್ಲ. ರೋಗಿಗಳ ರಕ್ತ, ವಾಂತಿ ಹಾಗೂ ಆಹಾರದ ಮಾದರಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟು ವರದಿ ಬಂದ ಬಳಿಕ ಘಟನೆಗೆ ನಿಖರ ಕಾರಣವನ್ನು ಹೇಳಬಹುದೆಂದು ತಿಳಿಸಿದ್ದರು.

MYS 10

ನಡೆದಿದ್ದು ಏನು?
ಸುಲ್ವಾಡಿ ಗ್ರಾಮದ ಕಿಚ್ಚುಕುತ್ತಿ ಮಾರಮ್ಮ ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗೆ ಗೋಪುರದ ಶಂಕುಸ್ಥಾಪನೆ ನಡೆದಿತ್ತು. ಈ ಕಾರ್ಯಕ್ರಮದ ನಿಮಿತ್ತ ಭಕ್ತರಿಗೆ ಹಾಗೂ ಸ್ಥಳೀಯರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಪೂಜೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಭಕ್ತರು ಪ್ರಸಾದದ ರೂಪದಲ್ಲಿ ರೈಸ್‍ಬಾತ್ ಸೇವಿಸಿದ್ದಾರೆ. ಸ್ವಲ್ಪ ಸಮಯದ ನಂತರ ರೈಸ್‍ಬಾತ್ ಸೇವಿಸಿದ್ದ 80ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿ ಬಿದ್ದಿದ್ದಾರೆ. ಇದನ್ನು ನೋಡಿದ ಸ್ಥಳೀಯರೊಬ್ಬರು 108ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ದುರಂತದಲ್ಲಿ ಈವರೆಗೂ 14 ಮಂದಿ ಮೃತಪಟ್ಟಿದ್ದಾರೆ.

https://www.youtube.com/watch?v=EBJ_QLJGny8

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

TAGGED:FSL ReportIGPmysuruprasadaPublic TVSharat Chandraಎಫ್‍ಎಸ್‍ಎಲ್ ವರದಿಐಜಿಪಿಪಬ್ಲಿಕ್ ಟಿವಿಪ್ರಸಾದಮೈಸೂರುಶರತ್ ಚಂದ್ರ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

RCB vs SRH Special appreciation for phil salt By Dinesh Karthik Stunning catch 1
Cricket

ನಾನು ಎಲ್ಲಿ ಎಂದಿದ್ದಕ್ಕೆ ಡಿಕೆಯಿಂದ ಬೆಂಕಿ ಪೋಸ್ಟ್‌ – ಸಾಲ್ಟ್‌ಗೆ ವಿಶೇಷ ಗೌರವ

Public TV
By Public TV
12 minutes ago
Husband And Wife
Bengaluru City

ನನ್ನ ಸ್ನೇಹಿತೆ ಜೊತೆಗೂ ಸೇರು.. ಪತ್ನಿಯ ವಿಕೃತ ಸೆಕ್ಸ್‌ ದಾಹಕ್ಕೆ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿ

Public TV
By Public TV
14 minutes ago
Wood stove 5
Chikkaballapur

ಎಲ್‌ಪಿಜಿ ಅಭಾವ – ಹೊಗೆರಹಿತ ಎಲೆಕ್ಟ್ರಿಕ್‌ ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕ

Public TV
By Public TV
30 minutes ago
Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
54 minutes ago
qamar javed bajwa
Latest

ಬಾತ್‌ರೂಮಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು

Public TV
By Public TV
1 hour ago
Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?