ಮೈಸೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿಮ ಸುಳ್ವಾಡಿ ಮಾರಮ್ಮನ ಸನ್ನಿಧಿಯಲ್ಲಿ ವಿಷಪ್ರಸಾದಕ್ಕೆ ಸಾವಿನ ಸರಣಿ ಮುಂದುವರಿದಿದ್ದು, ಇಂದು ಮುಂಜಾನೆ ಅಪೋಲೊ ಆಸ್ಪತ್ರೆಯಲ್ಲಿ ಅಸ್ವಸ್ಥರಾಗಿದ್ದ ಇಬ್ಬರು ಮೃತಪಟ್ಟಿದ್ದಾರೆ.
ಸಾಲಮ್ಮ(35) ಮತ್ತು ಮಗೇಶ್ವರಿ (35) ಮೃತ ದುರ್ದೈವಿಗಳು. ಸಾಲಮ್ಮ ಶುಕ್ರವಾರ ತಮ್ಮ ಸಂಬಂಧಿಗಳ ಜೊತೆ ದೇವಸ್ಥಾನಕ್ಕೆ ಹೋಗಿ ಪ್ರಸಾದ ತಿಂದಿದ್ದರು. ಬಳಿಕ ಸಾಲಮ್ಮ ಮತ್ತು ಮಂಗೇಶ್ವರಿ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಇಬ್ಬರೂ ಸಾವನ್ನಪ್ಪಿದ್ದಾರೆ.
Advertisement
Advertisement
ಸಾಲಮ್ಮ ಅವರ ಪತಿ ಆರು ತಿಂಗಳ ಹಿಂದೆಯಷ್ಟೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಇನ್ನೂ ಮಗೇಶ್ವರಿ ಎಂ.ಜಿ ದೊಡ್ಡಿ ನಿವಾಸಿಯಾಗಿದ್ದು, ಬೆಳಗ್ಗೆ 8.10ಕ್ಕೆ ಅಪೋಲೊ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
Advertisement
ಕಿಚ್ಚುಗುತ್ ಮಾರಮ್ಮನ ಸನ್ನಿಧಿಯಲ್ಲಿ ದುರಂತ ನಡೆದು 2 ದಿನ ಕಳೆದೋಗಿದೆ. ಪ್ರಕಾಶ್ ಎಂಬವರ ಸಾವಿನೊಂದಿಗೆ ಮೃತರ ಸಂಖ್ಯೆ 12ಕ್ಕೆ ಏರಿಕೆಯಾಗಿತ್ತು. ಈಗ ಮತ್ತಿಬ್ಬರ ಸಾವಿನಿಂದ ಮೃತರ ಸಂಖ್ಯೆ ಏರಿಕೆಯಾಗಿದೆ. 15 ಜನ ಇನ್ನೂ ವೆಂಟಿಲೇಟರ್ ನಲ್ಲಿ ಸಾವು- ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಇನ್ನೂ ಅಸ್ವಸ್ಥಗೊಂಡಿರುವ 104 ಜನ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
ಚೆಲುವಾಂಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 10 ಮಕ್ಕಳನ್ನು ನಗರದ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ಶಿಫ್ಟ್ ಮಾಡಲಾಗಿದೆ. ಕಾವೇರಿ ಆಸ್ಪತ್ರೆಯಲ್ಲಿ 14, ಕೆ.ಆರ್. ಆಸ್ಪತ್ರೆಯಲ್ಲಿ 24, ಅಪೋಲೊ ಆಸ್ಪತ್ರೆಯಲ್ಲಿ 14, ಜೆಎಸ್‍ಎಸ್ ಆಸ್ಪತ್ರೆಯಲ್ಲಿ 13 ಮಂದಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶನಿವಾರ ರಾತ್ರಿ ಮುಜರಾಯಿ ಸಚಿವ ರಾಜಶೇಖರ್ ಪಾಟೀಲ್ ಆಸ್ಪತ್ರೆಗೆ ಭೇಟಿ ನೀಡಿದ್ದು, ಈ ದೇವಸ್ಥಾನ ಮುಜುರಾಯಿ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ. ಮುಜರಾಯಿ ವ್ಯಾಪ್ತಿಯ ಎಲ್ಲಾ ದೇವಾಲಯಗಳಲ್ಲೂ ಎಚ್ಚರ ವಹಿಸುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv