Connect with us

Bengaluru City

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ – ಸಿಎಂ ಸ್ಪಷ್ಟನೆ

Published

on

ಬೆಂಗಳೂರು: ರಾಜ್ಯದಲ್ಲಿ ಅಭಿವೃದ್ಧಿ ಪ್ರಾಧಿಕಾರ ರಚನೆ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದವರ ಅಭಿವೃದ್ಧಿಗಾಗಿ ರಚಿಸಲು ಉದ್ದೇಶಿಸಲಾಗಿದೆ. ಮರಾಠಿ ಭಾಷೆಗೂ ಈ ಪ್ರಾಧಿಕಾರಕ್ಕೂ ಯಾವುದೇ ಸಂಬಂಧ ಇಲ್ಲ. ಮರಾಠ ಜನಾಂಗದವರು ತಲಾತಲಾಂತರಗಳಿಂದ ಕರ್ನಾಟಕದಲ್ಲಿಯೇ ವಾಸವಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಅವರ ಸರ್ವತೋಮುಖ ಅಭಿವೃದ್ಧಿಯಾಗಬೇಕು ಎನ್ನುವ ಆಶಯದಿಂದ ಈ ಪ್ರಾಧಿಕಾರವನ್ನು ಸ್ಥಾಪಿಸಲು ಕ್ರಮವಹಿಸಲಾಗುತ್ತಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.

ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದವರ ಅಭಿವೃದ್ಧಿಗಾಗಿ ರಚಿಸಲು ಉದ್ದೇಶಿಸಲಾಗಿದೆ. ಮರಾಠಿ ಭಾಷೆಗೂ ಈ ಪ್ರಾಧಿಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿಗಳು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಬಲಿಷ್ಠ ಮತ್ತು ನಿರ್ಣಾಯಕ ಸಮುದಾಯವಾಗಿರುವ ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ಧಿಗಾಗಿ ಪ್ರಾಧಿಕಾರ ರಚಿಸಲಾಗಿದೆ. ವೀರಶೈವ ಲಿಂಗಾಯತ ಸಮಾಜದ ಸಂಪುಟ ಸಚಿವರ ಒತ್ತಡಕ್ಕೆ ತಲೆ ಬಾಗಿ ಸಿಎಂ ಯಡಿಯೂರಪ್ಪ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಮರಾಠ ಸಮುದಾಯದ ಪ್ರಾಧಿಕಾರಕ್ಕೆ 50 ಕೋಟಿ ಮೀಸಲು ಇರಿಸಿದ್ದ ಸರ್ಕಾರ, ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರಕ್ಕೆ ಯಾವುದೇ ಅನುದಾನವನ್ನು ತಕ್ಷಣಕ್ಕೆ ನಿಗದಿ ಮಾಡಿರುವುದು ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ರಾಜ್ಯ ರಾಜಕೀಯದ ಮತ್ತೊಂದು ಪ್ರಭಾವಿ ಸಮುದಾಯ ಎನಿಸಿಕೊಂಡಿರುವ ಒಕ್ಕಲಿಗ ಸಮುದಾಯದ ಮುಖಂಡರು ಕೂಡ ತಮ್ಮ ನಮ್ಮ ಜಾತಿಗೂ ಅಭಿವೃದ್ಧಿ ಪ್ರಾಧೀಕಾರ ರಚನೆ ಮಾಡಿ ಎಂದು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ.

ಒಕ್ಕಲಿಗ ಪ್ರಾಧಿಕಾರದ ಬೇಡಿಕೆಯನ್ನು ಮಂಡಿಸಿರೋದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್‍ಆರ್ ವಿಶ್ವನಾಥ್. ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಮ್ಮ ತಕರಾರಿಲ್ಲ. ಆದ್ರೆ ಅದೇ ರೀತಿ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನು ರಚಿಸಲಿ ಎಂದಿದ್ದಾರೆ. ಶೀಘ್ರವೇ ಸಿಎಂ ಭೇಟಿ ಮಾಡೋದಾಗಿ ತಿಳಿಸಿದ್ದಾರೆ. ಇನ್ನು ಜೈನ ಸಮುದಾಯ ಕೂಡ ನಿಗಮ ಮಂಡಳಿ ರಚನೆಗೆ ಆಗ್ರಹಿಸಿದೆ.

Click to comment

Leave a Reply

Your email address will not be published. Required fields are marked *