ಬೆಳಗಾವಿ: ಮಹಾರಾಷ್ಟ್ರದಲ್ಲಿ (Maharashtra) ಮತ್ತೆ ಪುಂಡಾಟ ಮುಂದುವರಿದಿದ್ದು, ಕರ್ನಾಟಕದ (Karnataka) ಬಸ್‍ಗಳಿಗೆ (Bus) ಕಲ್ಲು ತೂರಾಟ ನಡೆಸಿ ಉದ್ಧಟತನ ಪ್ರದರ್ಶನ ಮಾಡುತ್ತಿದ್ದಾರೆ. ಸದ್ಯ ಬೆಳಗಾವಿ ಜಿಲ್ಲಾ ಪೊಲೀಸರ ಸೂಚನೆ ಮೇರೆಗೆ ಮಿರಜ್ ಮಾರ್ಗವಾಗಿ ಸಂಚರಿಸುವ ಎಲ್ಲಾ ಕರ್ನಾಟಕದ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
Advertisement
ಮಹಾರಾಷ್ಟ್ರದ ಮಿರಜ್ ಕಾಗವಾಡ ಮಧ್ಯೆ ಕರ್ನಾಟಕ ಬಸ್‍ಗೆ ಮಹಾರಾಷ್ಟ್ರದ ಪುಂಡರು ನಿನ್ನೆ ಮಧ್ಯರಾತ್ರಿ ಪುಣೆಯಿಂದ ಅಥಣಿಗೆ ಬರುತ್ತಿದ್ದ ಕರ್ನಾಟಕದ ಬಸ್ ಮೇಲೆ ಕಲ್ಲು ತೂರಿದ್ದಾರೆ. ಬಸ್‍ಗೆ ಕಲ್ಲು ತೂರಿದ ಪರಿಣಾಮ ಅಥಣಿ ಡಿಪೋಗೆ ಸೇರಿದ್ದ ಬಸ್‍ನ ಮುಂದಿನ ಗಾಜು ಜಖಂ ಆಗಿದೆ. ಇದನ್ನೂ ಓದಿ: ಮಹಾರಾಷ್ಟ್ರದಿಂದ ಬೆಳಗಾವಿಗೆ ಬರುತ್ತಿದ್ದ 300ಕ್ಕೂ ಹೆಚ್ಚು ಬಸ್‌ಗಳು ತಾತ್ಕಾಲಿಕ ಸ್ಥಗಿತ
Advertisement
Advertisement
ಕರ್ನಾಟಕದ ಬಸ್‍ಗಳಿಗೆ ಕಲ್ಲು ತೂರಾಟ ಹಿನ್ನೆಲೆ ಕರ್ನಾಟಕದ ಬಸ್‍ಗಳ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಹಾರಾಷ್ಟ್ರದ ಮಿರಜ್ ಮಾರ್ಗವಾಗಿ ಸಂಚರಿಸುವ ಎಲ್ಲಾ ಕರ್ನಾಟಕದ ಬಸ್‍ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಬೆಳಗಾವಿ ಜಿಲ್ಲಾ ಪೊಲೀಸರ ಸೂಚನೆ ಮೇರೆಗೆ ಕಾಗವಾಡ ಬಾರ್ಡರ್ ಮಾರ್ಗವಾಗಿ ಸಂಚರಿಸುವ ಎಲ್ಲಾ ಬಸ್ ಸೇವೆ ಬಂದ್ ಮಾಡಲಾಗಿದೆ. ನಿನ್ನೆ ಕರ್ನಾಟಕದ ಬಸ್‌ಗಳಿಗೆ ಮಸಿ ಬಳಿದಿದ್ದರು. ಇದನ್ನೂ ಓದಿ: ಬಿಬಿಎಂಪಿ ಅಧಿಕಾರಿಗಳ ಫೋನ್ ಕಾಲ್ ಹಿಂದೆ ಬಿದ್ದ ಕೇಂದ್ರ ಚುನಾವಣಾ ಆಯೋಗ