ಮರಾಠಿ ಸಿನಿಮಾಗಳ ಮೂಲಕ ಸಂಚಲನ ಮೂಡಿಸಿರುವ ನಟ ಪ್ರದೀಪ್ ಪಟವರ್ಧನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪ್ರದೀಪ್ ಅಗಲಿಕೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕ್ನಾಥ್ ಶಿಂಧೆ ಸಂತಾಪ ಸೂಚಿಸಿದ್ದಾರೆ.
ರಂಗಭೂಮಿ ಹಿನ್ನಲೆ ಇರುವ ನಟ ಪ್ರದೀಪ್, ಮರಾಠಿ ಚಿತ್ರರಂಗದಲ್ಲಿ ಸಾಕಷ್ಟು ಸಿನಿಮಾಗಳ ಮೂಲಕ ಗುರುತಿಸಿಕೊಳ್ತಿದ್ದಾರೆ. ಕಿರುತೆರೆ ಜತೆಗೆ ಬಾಲಿವುಡ್ ಸಿನಿಮಾಗಳಲ್ಲೂ ನಟಿಸಿದ್ದರು. ಇನ್ನು ೬೪ ವರ್ಷದ ನಟ ಪ್ರದೀಪ್ ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದಾರೆ. ನಟ ಪ್ರದೀಪ್ ನಿಧನದಿಂದ ಮರಾಠಿ ಚಿತ್ರರಂಗದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ:ನಾನು ಎಷ್ಟೋ ಜನರ ಜೊತೆ ಫ್ಲರ್ಟ್ ಮಾಡಿದ್ದೇನೆ ಲೆಕ್ಕವಿಲ್ಲ: ಅರ್ಜುನ್ ರಮೇಶ್
मराठी रंगभूमीवरील मोरूची मावशी, बायको असून शेजारी, लग्नाची बेडी तसेच मराठी चित्रपटसृष्टीत आपल्या सहजसुंदर अभिनयाने रसिक प्रेक्षकांच्या हृदयावर अधिराज्य गाजवणारे सदाबहार अभिनेते प्रदीप पटवर्धन यांचे दुःखद निधन झाले. त्यांच्या जाण्याने मराठी कलासृष्टीने उमद्या कलावंताला गमावले आहे. pic.twitter.com/CVjESFYCkf
— Eknath Shinde – एकनाथ शिंदे (@mieknathshinde) August 9, 2022
ಮರಾಠಿ ಸಿನಿಮಾಗಳಲ್ಲಿನ ತಮ್ಮ ಅದ್ಭುತ ನಟನೆಯಿಂದಾಗಿ ಪ್ರದೀಪ್ ಪಟವರ್ಧನ್ ಅವರು ಪ್ರೇಕ್ಷಕರ ಹೃದಯ ಗೆದ್ದಿದ್ದರು. ಇಂದು ಅವರು ನಿಧನರಾಗಿದ್ದಾರೆ. ಅವರ ಅಗಲಿಕೆಯಿಂದ ಮರಾಠಿ ಕಲಾ ಪ್ರಪಂಚಕ್ಕೆ ತೀವ್ರ ನಷ್ಟ ಆಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ನೆಚ್ಚಿನ ನಟನ ನಿಧನಕ್ಕೆ ಅಭಿಮಾನಿಗಳು, ಸಹಕಲಾವಿದರು, ಹಿತೈಷಿಗಳು ಸಂತಾಪ ಸೂಚಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]