ಮುಂಬೈ: ಇಲ್ಲಿನ ಕಂಡಿವಲಿಯಲ್ಲಿ ನಡೆದ ಭೀಕರ ಅಪಘಾತವೊಂದರಲ್ಲಿ ಮರಾಠಿ ನಟಿ (Marathi Actress) ಉರ್ಮಿಳಾ ಕೊಠಾರೆ (Urmila Kothare) ಅವರ ಕಾರು ಹರಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ.
ನಟಿ ಉರ್ಮಿಳಾ ಕೊಠಾರೆ ಚಿತ್ರೀಕರಣ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮೆಟ್ರೋ ರೈಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಬ್ಬರು ಕಾರ್ಮಿಕರಿಗೆ ನಟಿಯ ಕಾರು ಡಿಕ್ಕಿ ಹೊಡೆದಿದೆ.ಇದನ್ನೂ ಓದಿ: ಡಿ.ಕೆ ಸುರೇಶ್ ತಂಗಿ ಅಂತ ಹೇಳ್ಕೊಂಡು ವಂಚನೆ ಕೇಸ್ -ಆರೋಪಿ ಐಶ್ವರ್ಯ ಗೌಡ, ಪತಿ ಹರೀಶ್ ಅರೆಸ್ಟ್
Advertisement
Advertisement
ಈ ಕುರಿತು ಅಧಿಕಾರಿಗಳು ಮಾತನಾಡಿ, ನಟಿಯ ಕಾರು ಅತಿವೇಗದಲ್ಲಿದ್ದು, ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಪರಿಣಾಮ ಮೆಟ್ರೋ ರೈಲಿನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ನಟಿ ಉರ್ಮಿಳಾ ಹಾಗೂ ಚಾಲಕ ಕೂಡ ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
Advertisement
ಸದ್ಯ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನೂ ಅಪಘಾತದಲ್ಲಿ ನಟಿಯ ಕಾರಿಗೆ ಭಾರೀ ಹಾನಿಯಾಗಿದೆ.
Advertisement
ನಟಿ ಮರಾಠಿಯ ದುನಿಯಾದಾರಿ, ಹಿಂದಿಯ ಥ್ಯಾಂಕ್ ಗಾಡ್ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ.ಇದನ್ನೂ ಓದಿ: ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ಗೆ ಕೋಲಾರದ ಯುವತಿ ಆಯ್ಕೆ