ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ (Belagavi City Corporation) ಮೇಯರ್ (Mayor) ಆಗಿ ಮರಾಠ ಸಮುದಾಯದ (Marathi Community) ಶೋಭಾ ಸೋಮನಾಚೆ ಅವಿರೋಧವಾಗಿ ಆಯ್ಕೆಯಾಗಿದ್ದು, ಉಪಮೇಯರ್ ಆಗಿ ಬಿಜೆಪಿಯ ರೇಷ್ಮಾ ಪಾಟೀಲ್ ಆಯ್ಕೆಗೊಂಡಿದ್ದಾರೆ ಎಂದು ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿ ಎಂ.ಜಿ ಹಿರೇಮಠ ಘೋಷಿಸಿದ್ದಾರೆ.
Advertisement
ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಉಪಮೇಯರ್ ಆಗಿ ಬಿಜೆಪಿಯ ರೇಷ್ಮಾ ಪಾಟೀಲ್ ಆಯ್ಕೆಯಾಗಿದ್ದಾರೆ. ರೇಷ್ಮಾ ಪಾಟೀಲ್‌ಗೆ 42 ಮತಗಳು ಪಡೆದರೆ, ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಂಇಎಸ್ (MES) ಅಭ್ಯರ್ಥಿ ವೈಶಾಲಿ ಭಾತಕಾಂಡೆ ಕೇವಲ 4 ಮತ ಪೆಡೆದು ತೀವ್ರ ಮುಖಭಂಗ ಅನುಭವಿಸಿದ್ದಾರೆ.
Advertisement
ಬೆಳಗಾವಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಪ್ರಕ್ರಿಯೆ ವೇಳೆ ಪ್ರಮಾಣ ವಚನ ಸ್ವೀಕರಿಸಿ ಕಾಂಗ್ರೆಸ್ (Congress) ಸದಸ್ಯರು ಹೊರನಡೆದು, ಚುನಾವಣೆಗೆ ಬಹಿಷ್ಕಾರ ಹಾಕಿದರು. ಇದನ್ನೂ ಓದಿ: ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್ ಸೇರ್ಪಡೆ: ಸತೀಶ್ ಜಾರಕಿಹೊಳಿ
Advertisement
Advertisement
ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕನ್ನಡ ಭಾಷಿಕ ಸದಸ್ಯರಿಗೆ ಮೇಯರ್ ಸ್ಥಾನ ನೀಡಲು ಕನ್ನಡಪರ ಸಂಘಟನೆಗಳ ಆಗ್ರಹಿಸಿದ್ದವು. ಈ ನಡುವೆ ಮೇಯರ್ ಸ್ಥಾನಕ್ಕಾಗಿ ಲಿಂಗಾಯತ, ಮರಾಠಾ ಸಮುದಾಯಗಳ ಮಧ್ಯೆ ಪೈಪೋಟಿ ಏರ್ಪಟ್ಟಿತ್ತು. ಇದನ್ನೂ ಓದಿ: ಹುಬ್ಬಳ್ಳಿಯಿಂದ ಪುಣೆಗೆ ನೇರ ವಿಮಾನ ಸೇವೆ ಆರಂಭ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k