ಚಂಡೀಗಢ: ಮನೆಯ ಬಳಿ ವಾಕಿಂಗ್ ಮಾಡುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಮೃತಪಟ್ಟಿರುವ ಘಟನೆ ಜಲಂಧರ್‌ನಲ್ಲಿ ನಡೆದಿದೆ.
ಫೌಜಾ ಸಿಂಗ್ ಅವರಿಗೆ 114 ವರ್ಷ ವಯಸ್ಸಾಗಿತ್ತು. ಫೌಜಾ ಅವರು ಸಂಜೆ ತಮ್ಮ ಮನೆಯ ಬಳಿ ವಾಕಿಂಗ್ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಉಕ್ರೇನ್ ಪ್ರಧಾನಿ ಡೆನಿಸ್ ಶ್ಮಿಹಾಲ್ ರಾಜೀನಾಮೆ
2000ರಲ್ಲಿ ಮ್ಯಾರಥಾನ್ ಪ್ರಯಾಣ ಆರಂಭಿಸಿದ್ದ ಫೌಜಾ ಸಿಂಗ್, 8 ಮ್ಯಾರಾಥಾನ್‌ಗಳಲ್ಲಿ ಭಾಗವಹಿಸಿದ್ದರು. ಈ ಮೂಲಕ ಅತ್ಯಂತ ಹಿರಿಯ ಮ್ಯಾರಾಥಾನ್ ಓಟಗಾರ ಎಂದು ಪ್ರಸಿದ್ಧಿ ಪಡೆದಿದ್ದರು. ಆದರೆ ಜನನ ಪ್ರಮಾಣಪತ್ರ ಇಲ್ಲದ ಕಾರಣ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ ಅಧಿಕೃತವಾಗಿ ನೋಂದಾಯಿಸಲು ಸಾಧ್ಯವಾಗಿರಲಿಲ್ಲ. ಇದನ್ನೂ ಓದಿ: ಉತ್ತರಾಖಂಡ | 150 ಅಡಿ ಆಳದ ಕಂದಕಕ್ಕೆ ಬಿದ್ದ ಬೊಲೆರೋ – 8 ಮಂದಿ ದುರ್ಮರಣ, ಐವರು ಗಂಭೀರ
ಅವರು ಕೊನೆಯದಾಗಿ 2013ರಲ್ಲಿ 101ನೇ ವಯಸ್ಸಿನಲ್ಲಿ ಹಾಂಕಾಂಗ್‌ನಲ್ಲಿ ನಡೆದ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದರು. ಫೌಜಾ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಭೂಸ್ವಾಧೀನ ಕೈಬಿಟ್ಟ ಕರ್ನಾಟಕ ಸರ್ಕಾರ – ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದ ಆಂಧ್ರ ಸಿಎಂ ಪುತ್ರ
ಫೌಜಾ ಸಿಂಗ್ ಅವರಿಗೆ ಡಿಕ್ಕಿ ಹೊಡೆದ ಕಾರಿನ ಮಾಹಿತಿ ಪತ್ತೆಯಾಗಿಲ್ಲ. ಈ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.