– 6.43 ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ
ಉಡುಪಿ: ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದ ಮನೆಗೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗುಲ್ವಾಡಿಯ ಉದಯನಗರದಲ್ಲಿ ನಡೆದಿದೆ.
ಕುಂದಾಪುರ ಗ್ರಾಮಾಂತರ ಪೊಲೀಸರು ಕಾರ್ಯಚರಣೆ ನಡೆಸಿ ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದ ಮನೆ ಮೇಲೆ ದಾಳಿ ನಡೆಸಿ, ಮಹಿಳೆ ಸಹಿತ ಇಬ್ಬರು ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ 6.43 ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ.
ನಜರುಲ್ಲಾ ಖಾನ್ (40) ಮತ್ತು ಫಾತಿಮಾ (33) ಬಂಧಿತ ಆರೋಪಿಗಳು. 8 ಕೆಜಿ 374 ಗ್ರಾಂ ತೂಕದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗಾಂಜಾವನ್ನು ಮಾರಾಟ ಮಾಡಲು ಗುಲ್ವಾಡಿಯ ಉದಯ ನಗರದ ಮನೆಯೊಂದರಲ್ಲಿ ಅಕ್ರಮ ದಾಸ್ತಾನು ಇಡಲಾಗಿತ್ತು.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.