ಚಿಕ್ಕಬಳ್ಳಾಪುರ: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೋಟಿ ಕೋಟಿ ಮೌಲ್ಯದ ಗಾಂಜಾವನ್ನ ವಶಪಡಿಸಿಕೊಂಡಿದ್ದಾರೆ.
ಮಲೇಶಿಯಾದಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನೊರ್ವನ ಬಳಿ ಒಂದು ಕೋಟಿ 91 ಲಕ್ಷ ರೂ. ಮೌಲ್ಯದ 5.48 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಇನ್ನೂ ಮತ್ತೊಂದು ಪ್ರಕರಣದಲ್ಲಿ ಪುಕೇಟ್ನಿಂದ ಬಂದ ಇಬ್ಬರು ಪ್ರಯಾಣಿಕರನ್ನು ಪರಿಶೀಲನೆಗೆ ಒಳಪಡಿಸಿದಾಗ ಒಂದು ಕೋಟಿ ಆರು ಲಕ್ಷ ರೂ. ಮೌಲ್ಯದ 3.03 ಕೆಜಿ ಹೈಡ್ರೋಫೋನಿಕ್ ಗಾಂಜಾ ಪತ್ತೆಯಾಗಿದೆ. ಇದನ್ನೂ ಓದಿ: ಮೆಟ್ರೋ ಟಿಕೆಟ್ ದರ ರಾಜ್ಯ ಸರ್ಕಾರ ಹಿಂಪಡೆಯಬೇಕು: ಎಸ್.ಆರ್.ವಿಶ್ವನಾಥ್
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ. ಇದನ್ನೂ ಓದಿ: ಸುಳ್ಳು ಹೇಳೋದ್ರಲ್ಲಿ ಸಿದ್ದರಾಮಯ್ಯ ನಿಸ್ಸೀಮರು: ಸಿ.ಟಿ.ರವಿ

