ಪರಿಷತ್‌ ಚುನಾವಣೆ; ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರಿತಿಬ್ಬೇಗೌಡ ಕಾಂಗ್ರೆಸ್‌ ಅಭ್ಯರ್ಥಿ

Public TV
1 Min Read
maritibbegowda

ಬೆಂಗಳೂರು: ವಿಧಾನ ಪರಿಷತ್‌ (Karnataka Legislative Council) ಚುನಾವಣೆಗೆ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮರಿತಿಬ್ಬೇಗೌಡ (Maritibbegowda) ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ.

ವರಿಷ್ಠರ ನಡೆಯಿಂದ ಅಸಮಾಧಾನಗೊಂಡಿದ್ದ ಮರಿತಿಬ್ಬೇಗೌಡ ಜೆಡಿಎಸ್‌ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಇತ್ತೀಚೆಗೆ ಜೆಡಿಎಸ್‌ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ಅವಧಿಗೂ ಮುನ್ನವೇ ರಾಜೀನಾಮೆ ನೀಡಿದ್ದರು. ಇದನ್ನೂ ಓದಿ: ಪರಿಷತ್‌ ಚುನಾವಣೆಯಲ್ಲೂ ಮೈತ್ರಿ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌; ಕಮಲಕ್ಕೆ 5, ಜೆಡಿಎಸ್‌ಗೆ 1 ಸ್ಥಾನ

congress flag

ಅದಾದ ಬಳಿಕ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಅಲ್ಲದೇ ಕಾಂಗ್ರೆಸ್‌ ಪಕ್ಷದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಬಳಿಕ ಅವರು ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದರು.

ಪರಿಷತ್‌ ಚುನಾವಣೆಗೆ ಬಿಜೆಪಿ ಐದು ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಒಂದು ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದು, ಮೈತ್ರಿ ಮುಂದುವರಿಸುವುದಾಗಿ ತಿಳಿಸಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಕಳೆದ ಐದು ದಿನದಲ್ಲಿ ಧರೆಗುರುಳಿದ 271 ಮರ

Share This Article