ನವದೆಹಲಿ: ಮಾರ್ಕಂಡೇಯ ಜಲಾಶಯ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕದ ನಡುವೆ ಸೌಹರ್ದ ಮಾತುಕತೆಗೆ ಕೇಂದ್ರ ಸರ್ಕಾರ ಸಮಿತಿವೊಂದನ್ನು ರಚಿಸಿದೆ. ಸಮಿತಿ ಮೂಲಕ ವಿವಾದಕ್ಕೆ ಬಗೆಹರಿಸಿಕೊಳ್ಳಲು ಕೇಂದ್ರ ಸರ್ಕಾರ ಸೂಚಿಸಿದೆ.
ಪೆನ್ನಾರ್ ನದಿ ಕಣಿವೆ ವ್ಯಾಪ್ತಿಯಲ್ಲಿ ಕರ್ನಾಟಕದ ಕೋಲಾರ ಜಿಲ್ಲೆಯಲ್ಲಿ ಮಾರ್ಕಂಡೇಯ ಜಲಾಶಯ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದನ್ನು ವಿರೋಧಿಸಿದ ತಮಿಳುನಾಡು ಕೇಂದ್ರ ಸರ್ಕಾರಕ್ಕೆ ನ್ಯಾಯಾಧೀಕರಣ ರಚನೆ ಮಾಡಲು ಮನವಿ ಮಾಡಿತ್ತು. ತಮಿಳುನಾಡಿನ ಮನವಿ ಮೇರೆಗೆ ಕೇಂದ್ರ ಸರ್ಕಾರ ನ್ಯಾಯಮಂಡಳಿ ಬದಲು ಸಮಾಲೋಚನಾ ಸಮಿತಿಯೊಂದನ್ನು ರಚಿಸಿದ್ದು ಈ ಮೂಲಕ ವಿವಾದ ಬಗೆಹರಿಸಿಕೊಳ್ಳುವಂತೆ ತಿಳಿಸಿದೆ.
Advertisement
Advertisement
ಸಮಿತಿಯು ಫೆಬ್ರವರಿ 24ರಂದು ದೆಹಲಿಯಲ್ಲಿ ಸಭೆ ನಡೆಸಲಿದ್ದು, ಅಂದು ಕರ್ನಾಟಕ ತಮಿಳುನಾಡಿನ ವಾದವನ್ನು ಕೇಳಲಿದೆ. ಕಳೆದ ವರ್ಷ ಕರ್ನಾಟಕ ಪೆನ್ನಾರ್ ನದಿಗೆ ಅಡ್ಡಲಾಗಿ ಹೊಸ ಅಣೆಕಟ್ಟು ನಿರ್ಮಿಸುವುದನ್ನು ತಡೆಯಲು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ತಮಿಳುನಾಡಿನ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿ, ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲು ನಿರ್ದೇಶನ ನೀಡಿತು.