ಚಿತ್ರದುರ್ಗ: ಹೆಣ್ಣು ನೋಡುವಲ್ಲಿಂದ ಹಿಡಿದು ಇನ್ನೇನು ತಾಳಿ ಕಟ್ಟುವವರೆಗಿನ ಎಲ್ಲಾ ಶಾಸ್ತ್ರ, ಸಿದ್ಧತೆಗಳು ನಡೆದ ಬಳಿಕ ಮಂಟಪದಲ್ಲಿಯೇ ಕೆಲವೊಂದು ಮದುವೆಗಳು ಮುರಿದುಬಿದ್ದ ಪ್ರಸಂಗಗಳನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಇದೀಗ ಕೋಟೆನಾಡು ಚಿತ್ರದುರ್ಗದಲ್ಲಿ (Chitradurga) ಅಂಥದ್ದೇ ಘಟನೆಯೊಂದು ನಡೆದಿದೆ.
ಹೌದು. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ (Hosadurga Taluku) ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ತಾಳಿ ಕಟ್ಟಿಸಿಕೊಳ್ಳಲು ವಧು ನಿರಾಕರಿಸಿದ ಹಿನ್ನೆಲೆಯಲ್ಲಿ ಮದುವೆ ಕ್ಯಾನ್ಸಲ್ (Marriage Cancel) ಆಗಿದೆ. ವರ ತಾಳಿಕಟ್ಟುವಾಗ ವಧು ತಾಳಿಗೆ ಕೈ ಅಡ್ಡ ಹಿಡಿದು ತಡೆದ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ನಡೆದಿದ್ದೇನು..?: ಚಿಕ್ಕಬ್ಯಾಲದಕೆರೆ ಗ್ರಾಮದ ಮಂಜುನಾಥ್ ಹಾಗೂ ಚಳ್ಳಕೆರೆ ತಾಲೂಕಿನ ತಿಪ್ಪರೆಡ್ಡಿಹಳ್ಳಿಯ ಐಶ್ವರ್ಯಾ ಜೊತೆ ವಿವಾಹ ಫಿಕ್ಸ್ ಆಗಿತ್ತು. ಆದರೆ ಗುರುವಾರ ಬೆಳಗ್ಗೆ ಗ್ರಾಮದ ಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆಯ ಮುಹೂರ್ತ ನಡೆಯುವ ವೇಳೆ ವರನಿಗೆ ವಧು ಶಾಕ್ ನೀಡಿದ್ದಾಳೆ. ವರ ತಾಳಿಕಟ್ಟುವ ವೇಳೆ ಮಂಜುನಾಥ್ ನನಗೆ ಇಷ್ಟ ಇಲ್ಲವೆಂದು ಹೇಳಿದ್ದಾಳೆ. ಯುವತಿ ನಡೆಗೆ ಯುವಕನ ಸಂಬಂಧಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಆಗ ಯುವತಿ ಮನೆಯವರು ಹಾಗೂ ಯುವಕನ ಕುಟುಂಬಸ್ಥರ ನಡುವೆ ವಾಗ್ವಾದ ನಡೆದಿದೆ. ಇದನ್ನೂ ಓದಿ: 4 ಲಕ್ಷ ರೂ.ಗೆ ತಾಯಿಯಿಂದ್ಲೇ ಮಗಳ ಮಾರಾಟ – ಖರೀದಿಸಿ ಮದ್ವೆಯಾದ ವ್ಯಕ್ತಿಯಿಂದ ಅನೈತಿಕ ಚಟುವಟಿಕೆಗೆ ಒತ್ತಾಯ
ಈ ವೇಳೆ ಎರಡು ಕಡೆಯ ಸಂಬಂಧಿಗಳು ವಧುವಿನ ಮನವೊಲಿಸಲು ಯತ್ನಿಸಿದ್ರು ಕೂಡ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಮದುವೆ ಮುರಿದುಬಿದ್ದಿದೆ. ಮದುವೆಗೆ ಆಗಮಿಸಿದ ಜನರು, ಸಂಬಂಧಿಗಳು ವಧುಗೆ ಹಿಡಿಶಾಪ ಹಾಕಿದ್ದಾರೆ. ವರನ ಕನಸು ನುಚ್ಚು ನೂರು ಮಾಡಿದಳು. ಮೊದಲೇ ತಿಳಿಸಿದ್ರೆ ಸಮಸ್ಯೆ ಎದುರಾಗ್ತಿರಲಿಲ್ಲ ಅಂತ ಹಿಡಿಶಾಪ ಹಾಕಿದ್ದಾರೆ.
ಮದುವೆ ನಿರಾಕರಣೆಗೆ ಈವರೆಗೆ ಕಾರಣ ತಿಳಿದುಬಂದಿಲ್ಲ. ಆದರೆ ಕುಟುಂಬಸ್ಥರ ಒತ್ತಾಯದ ಮೇರೆಗೆ ಮದುವೆಗೆ ಯುವತಿ ಸಮ್ಮತಿಸಿದ್ದು, ಆಕೆ ತಾಳಿಕಟ್ಟುವ ವೇಳೆ ಧೈರ್ಯ ಮಾಡಿ ವಿವಾಹ ನಿರಾಕರಿಸಿದ್ದಾಳೆಂಬ ಮಾತುಗಳು ಕೇಳಿಬಂದಿವೆ. ಸದ್ಯ ಪ್ರಕರಣ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.