ಬೆಂಗಳೂರು: ದೊಡ್ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದೆ. ನಟ ರಾಘವೇಂದ್ರ ರಾಜ್ಕುಮಾರ್ ಕಿರಿಯ ಪುತ್ರ ಯುವ ರಾಜ್ಕುಮಾರ್ ಬ್ಯಾಚುಲರ್ ಲೈಫ್ಗೆ ಗುಡ್ಬೈ ಹೇಳಲಿದ್ದು, ಗೆಳತಿ ಶ್ರೀದೇವಿ ಜೊತೆಗೆ ಸಪ್ತಪದಿ ತುಳಿಯಲಿದ್ದಾರೆ.
ಮೇ 26ರಂದು ಯುವರಾಜ್ಕುಮಾರ್ ತಮ್ಮ ಗೆಳತಿ ಶ್ರೀದೇವಿ ಜೊತೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ಅದ್ಧೂರಿಯಾಗಿ ಮದುವೆ ಆಗಲಿದ್ದಾರೆ. ಈ ಮದುವೆಗೆ ಈಗಿನಿಂದಲೇ ಎಲ್ಲ ತಯಾರಿ ನಡೆಯುತ್ತಿದೆ. ಅದೇ ದಿನ ಆರತಕ್ಷತೆ ಕಾರ್ಯಕ್ರಮ ಕೂಡ ಹಮ್ಮಿಕೊಂಡಿದ್ದಾರೆ. ಈಗಾಗಲೇ ಸಿನಿಮಾರಂಗದ ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡುತ್ತಿದ್ದು, ಮದುವೆ ತಯಾರಿಯಲ್ಲಿ ದೊಡ್ಮನೆ ಮಂದಿ ಸಾಕಷ್ಟು ಬ್ಯುಸಿಯಾಗಿದ್ದಾರೆ.
Advertisement
Advertisement
ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯುವ ರಾಜ್ಕುಮಾರ್ ಹಾಗೂ ಶ್ರೀದೇವಿ ಉಂಗುರ ಬದಲಾಯಿಸಿಕೊಂಡಿದ್ದರು. ಖಾಸಗಿ ಹೊಟೇಲ್ನಲ್ಲಿ ನಡೆದ ಸಮಾರಂಭದಲ್ಲಿ ಈ ಜೋಡಿ ಎಂಗೇಜ್ ಆಗಿದ್ದರು. ಯುವ ರಾಜ್ಕುಮಾರ್ ಹಾಗೂ ಶ್ರೀದೇವಿ ಉಂಗುರ ಬದಲಾವಣೆ ವೇಳೆ ರಾಜ್ ಕುಟುಂಬ ಸದಸ್ಯರು ಹಾಜರಾಗಿದ್ದು, ನವ ಜೋಡಿಗೆ ಶುಭ ಹಾರೈಸಿದ್ದರು.
Advertisement
Advertisement
ಈ ಹಿಂದೆ ಯುವ ಅವರ ಹೆಸರು ಗುರು ರಾಜ್ಕುಮಾರ್ ಆಗಿದ್ದು, ಈಗ ಯುವ ರಾಜ್ಕುಮಾರ್ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. ಯುವ ರಾಜ್ಕುಮಾರ್ ಇದುವರೆಗೂ ಯಾವ ಸಿನಿಮಾದಲ್ಲೂ ಹೀರೋ ಆಗಿ ಕಾಣಿಸಿಕೊಂಡಿಲ್ಲ. ಆದರೆ ತಮ್ಮ ಹೋಮ್ ಬ್ಯಾನರ್ ನಲ್ಲಿ ಬರುವ ಚಿತ್ರಗಳ ತೆರೆ ಹಿಂದೆ ಕೆಲಸ ಮಾಡಿದ್ದಾರೆ. ಸದ್ಯ ಯುವ ಮದುವೆ ಆದ ನಂತರ ಹೀರೋ ಆಗಿ ಕಾಣಿಸಿಕೊಳ್ಳಿದ್ದಾರೆ ಎಂದು ಹೇಳಲಾಗುತ್ತಿದೆ.
ಇತ್ತ ಕ್ರೇಜಿಸ್ಟಾರ್ ಮನೆಯಲ್ಲಿ ಮದುವೆ ಸಂಭ್ರಮ-ಸಡಗರ ಜೋರಾಗಿದೆ. ರವಿಮಾಮನ ಮಗಳು ಗೀತಾಂಜಲಿ ಮದುವೆ 28 ಹಾಗೂ 29ರಂದು ವಿಜೃಂಭಣೆಯಿಂದ ನಡಯಲಿದ್ದು ಸಿನಿಮಾ ಮಂದಿಗೆ ಆಹ್ವಾನ ಮಾಡುವುದರಲ್ಲಿ ಕ್ರೇಜಿ ಕುಟುಂಬ ಬ್ಯುಸಿಯಾಗಿದೆ.