ಮದುವೆಯಾಗಿ ಮೂರುವರೆ ತಿಂಗಳಿಗೆ ಗರ್ಭಿಣಿ: ಸ್ವರಾ ಭಾಸ್ಕರ್ ಸಿಕ್ಕಾಪಟ್ಟೆ ಟ್ರೋಲ್

Public TV
1 Min Read
Swara Bhaskar 1

ಬಾಲಿವುಡ್ ನಟಿ ಸ್ವರಾ ಭಾಸ್ಕರ್ (Swara Bhaskar) ಫೆಬ್ರವರಿ 16 ರಂದು ಹಸೆಮಣೆಗೆ ಏರಿ, ಅಭಿಮಾನಿಗಳಿಗೆ ಸರ್ ಪ್ರೈಸ್ ನೀಡಿದ್ದರು. ಇದೀಗ ಮತ್ತೊಂದು ಅಚ್ಚರಿಯ ಸುದ್ದಿಯನ್ನು ಹಂಚಿಕೊಂಡಿದ್ದು, ತಾವು ತಾಯಿ ಆಗುತ್ತಿರುವುದಾಗಿ ತಿಳಿಸಿದ್ದಾರೆ. ತಮಗೀಗ ನಾಲ್ಕು ತಿಂಗಳು ಎಂದು ಹೇಳಿಕೊಂಡಿದ್ದಾರೆ. ಮದುವೆಯಾಗಿ ಮೂರುವರೆ ತಿಂಗಳಿಗೆ ನಾಲ್ಕು ತಿಂಗಳ ಗರ್ಭಿಣಿ ಹೇಗೆ ಎಂದು ಸಖತ್ ಟ್ರೋಲ್ (Troll) ಆಗುತ್ತಿದ್ದಾರೆ.

swara bhaskar 2

ತಾವು ತಾಯಿ (Pregnant) ಆಗುತ್ತಿರುವ ವಿಷಯವನ್ನು ಸ್ವತಃ ಸ್ವರಾ ಭಾಸ್ಕರ್ ಅವರೇ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದು, ‘ನಿಮ್ಮೆಲ್ಲ ಪ್ರಾರ್ಥನೆಗಳು ಒಟ್ಟಿಗೆ ನೆರವೇರುತ್ತವೆ. ವಿಶ್ ಮಾಡಿ. ಅಕ್ಟೋಬರ್ ಬೇಬಿ’ ಎಂದು ಅವರು ಬರೆದುಕೊಂಡಿದ್ದಾರೆ. ಅಲ್ಲಿಗೆ ಅಕ್ಟೋಬರ್ ನಲ್ಲಿ ಕಂದನನ್ನು ಮನೆ ತುಂಬಿಸಿಕೊಳ್ಳಲು ಅವರು ರೆಡಿಯಾಗಿದ್ದಾರೆ. ಇದನ್ನೂ ಓದಿ:ಪ್ರಣಿತಾ ಹಾಟ್‌ನೆಸ್‌ಗೆ ಸಂತೂರ್ ಮಮ್ಮಿ ಎಂದ ನೆಟ್ಟಿಗರು

Swara Bhaskar

ಸ್ವರಾ ಭಾಸ್ಕರ್ ಇತ್ತೀಚಿಗೆ ಪೊಲಿಟಿಕಲ್ ಲೀಡರ್ ಫಹಾದ್ ಅಹ್ಮದ್ (Fahad Ahamad) ಅವರನ್ನ ಮದುವೆಯಾಗಿ ಅಚ್ಚರಿ ಮೂಡಿಸಿದ್ದರು. ಬಹುಕಾಲದ ಗೆಳೆಯನ ಜೊತೆ ಸ್ವರಾ ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟಿರುವ ಬೆನ್ನಲ್ಲೇ ತಮ್ಮ ಮೊದಲ ರಾತ್ರಿಯ ಬೆಡ್‌ರೂಮ್ ಫೋಟೋವನ್ನ ನಟಿ ಹಂಚಿಕೊಂಡು ಅಚ್ಚರಿ ಮೂಡಿಸಿದ್ದರು.

swara bhaskar

ಸಮಾಜವಾದಿ ಪಕ್ಷದ ಯುವ ಅಧ್ಯಕ್ಷ ಫಹಾದ್ ಜೊತೆ ಸ್ವರಾ ವಿಶೇಷ ಕಾಯ್ದೆಯಡಿ ಜ.6ರಂದು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಬಳಿಕ ಇತ್ತೀಚಿಗೆ ತಮ್ಮ ಮದುವೆಯ ಬಗ್ಗೆ ಸ್ವರಾ ಅಧಿಕೃತವಾಗಿ ತಿಳಿಸಿದ್ದರು. ಅಣ್ಣ ಎಂದು ಕರೆದು ಈಗ ಅವರನ್ನೇ ಮದುವೆಯಾಗಿದ್ದೀರಾ ಎಂದು ಟ್ರೋಲ್ ಮಾಡಲಾಯ್ತು. ಹೀಗೆ ಸಾಕಷ್ಟು ಟೀಕೆಗಳ ನಡುವೆ ಈ ನವಜೋಡಿ ದಾಂಪತ್ಯ ಜೀವನವನ್ನು ಖುಷಿಯಿಂದ ಕಳೆಯುತ್ತಿದ್ದಾರೆ.

 

ಬರೀ ವಿವಾದದ ಮೂಲಕವೇ ಗುರುತಿಸಿಕೊಂಡಿದ್ದ ಸ್ವರಾ, ನೇರ ದಿಟ್ಟ ಮಾತುಗಳಿಂದ ಸಾಕಷ್ಟು ವಿರೋಧಿಗಳನ್ನು ಗಳಿಸಿದ್ದರು. ಸ್ವರಾ ಏನೇ ಮಾತನಾಡಿದರೂ, ಅದು ವಿವಾದವಾಗಿ ಬದಲಾಗುತ್ತಿತ್ತು. ಈಗ ಅವೆಲ್ಲದರಿಂದ ದೂರ ಸರಿದು, ಹೊಸ ಜೀವನ ಕಟ್ಟಿಕೊಂಡಿದ್ದಾರೆ. ಆ ಜೀವನಕ್ಕೆ ಮತ್ತೊಂದು ಜೀವ ಬಂದು ಸೇರುತ್ತಿದೆ.

Share This Article