ಪಾಟ್ನಾ: ವಿವಾಹಿತ ಮಹಿಳೆ ಮೇಲೆ ಐವರು ಪುರುಷರು ಒಂದು ವಾರ ನಿರಂತ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ತನ್ನ ಪತಿಯೊಂದಿಗೆ ಅಕ್ಟೋಬರ್ 10ರಂದು ಜಗಳವಾಡಿ ಮನೆಯನ್ನು ಬಿಟ್ಟು ಹೋಗಿದ್ದರು. ಬಳಿಕ ಮಹಿಳೆ ಕೊಲ್ಕತ್ತಾಗೆ ಹೋಗಲು ನಿರ್ಧರಿಸಿ, ಪಾಟ್ನಾ ಜಂಕ್ಷನ್‍ಗೆ ಬಂದಿದ್ದಾರೆ. ಅಲ್ಲಿಂದ ಮಹಿಳೆ ಹೋಟೆಲ್‍ಗೆ ಹೋಗಿ, ಓನರ್ ಬಳಿ ಕೊಲ್ಕತ್ತಾಗೆ ಹೋಗುವ ರೈಲಿನ ಬಗ್ಗೆ ಮಾಹಿತಿ ಕೇಳಿದ್ದಾರೆ. ಇದನ್ನೂ ಓದಿ: ಭಾರೀ ಮಳೆಗೆ ಕೊಚ್ಚಿ ಹೋದ ಉತ್ತರಾಖಂಡ್ ರೈಲು ಹಳಿ
ಹೋಟೆಲ್ ಮಾಲೀಕ ಗೋಪಾಲ್ ತನ್ನ ಸ್ನೇಹಿತ ಅಮಿತ್‍ಗೆ ಮಹಿಳೆಯ ಬಗ್ಗೆ ಹೇಳಿದ್ದಾನೆ. ಬಳಿಕ ಇಬ್ಬರೂ ಆಕೆಯನ್ನು ಅಜಯ್ ಇನ್ನೊಬ್ಬ ವ್ಯಕ್ತಿಯ ಬಳಿ ಕರೆದುಕೊಂಡು ಹೋಗಿದ್ದಾರೆ. ಅವರು ಕಾರ್ಬಿಗಾಹಿಯಾ ಎಂಬ ಪ್ರದೇಶದ ಒಂದು ಕೊಠಡಿಯಲ್ಲಿ ರೈಲು ಬರುವವರೆಗೆ ಕಾಯುವಂತೆ ಮಹಿಳೆಗೆ ಹೇಳಿದ್ದಾರೆ ಎಂದು ಜಕ್ಕನಪುರ ಪೊಲೀಸ್ ಠಾಣೆಯ ತನಿಖಾಧಿಕಾರಿ ಕೆಪಿ ಶರ್ಮಾ ಹೇಳಿದ್ದಾರೆ. ಇದನ್ನೂ ಓದಿ: 50 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ ಶಿಲ್ಪಾ ಶೆಟ್ಟಿ
ಅಕ್ಟೋಬರ್ 17ರ ರಾತ್ರಿಯವರೆಗೆ ಸಂತ್ರಸ್ತೆಯನ್ನು ಆ ಕೋಣೆಯಲ್ಲಿ ಕೂಡಿಹಾಕಿದ್ದಾರೆ. ಒಬ್ಬ ಆರೋಪಿ ಆಕೆಯ ಮೇಲೆ ಕಣ್ಣಿಡಲು 24 ಗಂಟೆ ಕೋಣೆಯ ಹೊರಗೆ ಕಾಯುತ್ತಿದ್ದ. ಕೊಲ್ಕತ್ತಾ ತಲುಪಲು ಸಂತ್ರಸ್ತೆ ವಿಫಲವಾದ ಕಾರಣ, ಆಕೆಯ ಪತಿ ಜಕ್ಕನಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಮಹಿಳೆಯ ಮೊಬೈಲ್ ಟವರ್ ಪರಿಶೀಲಿಸಿದ್ದು, ಅದು ಪಾಟ್ನಾ ಜಂಕ್ಷನ್ ಆಕೆಯ ಕೊನೆಯ ಸ್ಥಳವೆಂದು ತೋರಿಸಿದೆ. ಸ್ಥಳೀಯ ಗುಪ್ತಚರ ಮಾಹಿತಿ ಆಧಾರದ ಮೇಲೆ ನಾವು ಮಹಿಳೆ ಇರುವ ಮನೆಯನ್ನು ತಲುಪಿದೆವು ಎಂದು ಅವರು ಹೇಳಿದ್ದಾರೆ.